ಎಲ್ಒಸಿ ಬಳಿ 2 ಸಾವಿರ ಸೇನೆ ನಿಯೋಜಿಸಿದ ಪಾಕ್, ತೀವ್ರ ನಿಗಾ ವಹಿಸಿದ ಭಾರತ

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಪಾಕ್ ಭಾರೀ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಪಾಕ್ ಭಾರೀ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ.

ಎಲ್ಒಸಿಯ ಬಾಘ್ ಮತ್ತು ಕೊಟ್ಲಿ ಸೆಕ್ಟರ್ ನಲ್ಲಿ ಪಾಕಿಸ್ತಾನ 2 ಸಾವಿರ ಸೈನಿಕರನ್ನು ನಿಯೋಜಿಸಿದೆ. ಭಾರತ ಸಹ ಸಮರ ಸನ್ನದ್ಧ ಸ್ಥಿತಿಯಲ್ಲಿದ್ದು, ಪಾಕ್ ಸೇನೆಯ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಲಷ್ಕರ್-ಇ- ತೊಯಿಬಾ(ಎಲ್ಇಟಿ) ಮತ್ತು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಗಳು ಸ್ಥಳೀಯರು ಮತ್ತು ಅಫ್ಘಾನಿ ಉಗ್ರರನ್ನು ಭಾರಿ ಸಂಖ್ಯೆಯಲ್ಲಿ ನಿಯೋಜಿಸಿಕೊಳ್ಳುತ್ತಿರುವ ಸಂದರ್ಭದಲ್ಲೇ ಪಾಕ್ ಸೇನೆ ಎಲ್ ಒಸಿ ಬಳಿ ಜಮಾವಣೆಗೊಂಡಿದೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ ಮಾಡಲು ಯತ್ನಿಸಿ ವಿಫಲವಾಗಿದ್ದ ಪಾಕಿಸ್ತಾನ ಈಗ ಎಲ್ ಒಸಿ ಬಳಿ ಉಗ್ರರ ನೆರವಿನೊಂದಿಗೆ 100ಕ್ಕೂ ಹೆಚ್ಚು ವಿಶೇಷ ಕಮಾಂಡೊಗಳನ್ನು ನಿಯೋಜಿಸಿ ಕಣಿವೆ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದೆ.

ಪಾಕ್ ಗೆ ತಕ್ಕ ಪ್ರತ್ಯುತ್ತರ ನೀಡುತ್ತಿರುವ ಭಾರತೀಯ ಸೇನೆ, 10ಕ್ಕೂ ಹೆಚ್ಚು ವಿಶೇಷ ಕಮಾಂಡೊಗಳನ್ನು ಹತ್ಯೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com