ಉಸಿರಾಟದ ತೊಂದರೆ: ಬುದ್ಧದೇವ್  ಆಸ್ಪತ್ರೆಗೆ ದಾಖಲು 

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ
ಬುದ್ಧದೇವ್ ಭಟ್ಟಾಚಾರ್ಯ

ಕೊಲ್ಕತ್ತಾ:  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ಸಿಪಿಐ-ಎಂ ಮುಖಂಡರಾಗಿರುವ 75 ವರ್ಷದ ಭಟ್ಟಾಚಾರ್ಯ ಅವರ ರಕ್ತದೊತ್ತಡ ಸಾಕಷ್ಟು ಕಡಿಮೆಯಾಗಿದೆ ಎಂದು ಖಾಸಗಿ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾತ್ರಿ 8 ಗಂಟೆಯ ನಂತರ ಭಟ್ಟಾಚಾರ್ಯ ಅವರನ್ನು ಆಸ್ಪತ್ರೆಗೆ ತರಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇಂದು ಮಧ್ಯಾಹ್ನದಿಂದ ಅವರಿಗೆ ಉಸಿರಾಟ ಹಾಗೂ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದ್ದು, ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರನ್ನು ವಿಚಾರಿಸಿದ್ದಾರೆ. ಭಟ್ಟಾಚಾರ್ಯ ಧೀರ್ಘಕಾಲದಿಂದ ಶ್ವಾಸಕೋಶದ ಕಾಯಿಲೆಯಿಂದ ಬಳುತ್ತಿದ್ದರು ಎನ್ನಲಾಗಿದೆ. ಸುರ್ಜ್ಯಾ  ಕಾಂತ ಮಿಶ್ರಾ ಸೇರಿದಂತೆ ಹಲವು ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಭಟ್ಟಾಚಾರ್ಯ 2000ರಿಂದ 2011ರವರೆಗೂ ಪಶ್ಟಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. 2018ರಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಸಿಪಿಐ-ಎಂ ನ ಪಾಲಿಟ್ ಬ್ಯುರೊ, ಕೇಂದ್ರ ಸಮಿತಿ ಮತ್ತು ರಾಜ್ಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ನಂತರ ಅವರು ದೃಷ್ಟಿಯನ್ನು ಕಳೆದುಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com