ಬಿಜೆಪಿ ಜೊತೆ ಮೈತ್ರಿ ಕುರಿತು ಶಿವಸೇನೆ ಹೊಸ ರಾಗ! 

ಸದ್ಯದಲ್ಲೇ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ನಡುವೆ ಶಿವಸೇನೆ-ಬಿಜೆಪಿ ನಡುವೆ ಸ್ಥಾನ ಹಂಚಿಕೆಯ ವಿಷಯವಾಗಿ ಪಟ್ಟು ಸಡಿಲಿಸದೇ ಇವೆ. 
ಬಿಜೆಪಿ ಜೊತೆ ಮೈತ್ರಿ ಕುರಿತು ಶಿವಸೇನೆ ಹೊಸ ರಾಗ!
ಬಿಜೆಪಿ ಜೊತೆ ಮೈತ್ರಿ ಕುರಿತು ಶಿವಸೇನೆ ಹೊಸ ರಾಗ!

ಮುಂಬೈ: ಸದ್ಯದಲ್ಲೇ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ನಡುವೆ ಶಿವಸೇನೆ-ಬಿಜೆಪಿ ನಡುವೆ ಸ್ಥಾನ ಹಂಚಿಕೆಯ ವಿಷಯವಾಗಿ ಪಟ್ಟು ಸಡಿಲಿಸದೇ ಇವೆ. 

ಈ ನಡುವೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಮಾತನಾಡಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಅನಿವಾರ್ಯ, ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. 

ಸೆ.07 ರಂದು ಮುಂಬೈ ನಲ್ಲಿ ಪ್ರಧಾನಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್ಟಿಕಲ್ 370 ರದ್ದುಗೊಳಿಸಿದ್ದಕ್ಕೆ ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೂ ಕರೆ ನೀಡಿದ್ದಾರೆ.
 
ಆರ್ಟಿಕಲ್ 370 ರದ್ದುಗೊಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದೆ. ಈಗ ದೇಶ ರಾಮ ಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಯನ್ನು ಎದುರು ನೋಡುತ್ತಿದೆ ಎಂದು ಠಾಕ್ರೆ ಹೇಳಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಇದು ಕೇವಲ ಪದಗಳಿಗೆ ಸೀಮಿತವಲ್ಲ, ನಿಜವಾದದ್ದು ಎಂಬುದನ್ನು ಮೋದಿ ಸಾಬೀತುಪಡಿಸಿದ್ದಾರೆ ಎಂದು ಮೋದಿ ಬಗ್ಗೆ ಉದ್ಧವ್ ಠಾಕ್ರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಅಗಾಧ ಸಾಮರ್ಥ್ಯವಿದೆ, ದೇಶಕ್ಕೆ ಸ್ಪಷ್ಟ ನಿರ್ದೇಶನ ನೀಡುವ ನಾಯಕತ್ವ ದೊರೆತಿದೆ, ಬಿಜೆಪಿ ಜೊತೆ ಶಿವಸೇನೆ ಮೈತ್ರಿ ಮುಂದುವರೆಯಲಿದೆ ಎಂದು ಠಾಕ್ರೆ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com