ಚಂದ್ರಯಾನ 2: ಲ್ಯಾಂಡಿಂಗ್ ಗೆ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತ- ಇಸ್ರೋ

ಚಂದ್ರಯಾನ-2 ಮೂಲಕ ಬಾಹ್ಯಾಕಾಶ ರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದ ಇಸ್ರೋಗೆ ಅಲ್ಪ ಹಿನ್ನಡೆಯಾಗಿದ್ದು, ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿದ್ದ ವಿಕ್ರಮ್ ಲ್ಯಾಂಡರ್ ನೌಕೆಯ ಸಂವಹನ ಕಡಿತವಾಗಿದೆ.
ಚಂದ್ರಯಾನ-2 ನಿಯಂತ್ರಣ ಕೊಠಡಿ
ಚಂದ್ರಯಾನ-2 ನಿಯಂತ್ರಣ ಕೊಠಡಿ

ಚಂದ್ರಯಾನ-2: ಲ್ಯಾಂಡಿಂಗ್ ವೇಳೆ ಸಂವಹನ ಕಡಿದುಕೊಂಡ ವಿಕ್ರಮ್ ಲ್ಯಾಂಡರ್

ಬೆಂಗಳೂರು: ಚಂದ್ರಯಾನ-2 ಮೂಲಕ ಬಾಹ್ಯಾಕಾಶ ರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದ ಇಸ್ರೋಗೆ ಅಲ್ಪ ಹಿನ್ನಡೆಯಾಗಿದ್ದು, ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿದ್ದ ವಿಕ್ರಮ್ ಲ್ಯಾಂಡರ್ ನೌಕೆಯ ಸಂವಹನ ಕಡಿತವಾಗಿದೆ.

ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿತಾದರೂ, ಲ್ಯಾಂಡಿಂಗ್ ಗೆ ಇನ್ನೂ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತವಾಯಿತು. ಹೀಗಾಗಿ ನಿಯಂತ್ರಣ ಕೊಠಡಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸುವ ಸತತ ಪರಿಶ್ರಮ ಪಟ್ಟರಾದರೂ ಸಾಧ್ಯವಾಗಲಿಲ್ಲ. ಅಂತಿಮವಾಗಿ ಇಸ್ರೋ ಅಧ್ಯಕ್ಷ ಕೆ ಶಿವನ್ ವಿಕ್ರಮ್ ಲ್ಯಾಂಡರ್ ನ ಸಂಪರ್ಕ ಕಡಿತವಾಗಿರುವ ಕುರಿತು ಘೋಷಣೆ ಮಾಡಿದರು.

ಇದಕ್ಕೂ ಮೊದಲು ವಿಕ್ರಮ್ ಲ್ಯಾಂಡರ್ ನ ಒಟ್ಟು ನಾಲ್ಕು ಎಂಜಿನ್ ಗಳನ್ನು ಉರಿಸುವ ಮೂಲಕ ಲ್ಯಾಂಡರ್ ಅನ್ನು ಸುರಕ್ಷಿತ ಲ್ಯಾಂಡಿಂಗ್ ಹಂತಕ್ಕೆ ತರಲಾಗಿತ್ತು. ಆದರೆ ಲ್ಯಾಂಡರ್ ಸುರಕ್ಷಿತ ಲ್ಯಾಂಡಿಂಗ್ ಹಂತದ ತಲುಪುತ್ತಿದ್ದಂತೆಯೇ ನೌಕೆಯ ಸಂಪರ್ಕ ಕಡಿತವಾಯಿತು.

ಇನ್ನು ಸಂಪರ್ಕ ಕಡಿತಗೊಂಡಿರುವ ವಿಕ್ರಮ್ ಲ್ಯಾಂಡರ್ ಮತ್ತು ಅದರೊಳಗಿರುವ ಪ್ರಜ್ಞಾನ್ ರೋವರ್ ಕುರಿತು ಸ್ಥಿತಿಗತಿ ವರದಿಗಾಗಿ ವಿಜ್ಞಾನಿಗಳು ಸತತ ಪ್ರಯತ್ನ ನಡೆಸುತ್ತಿದ್ದು, ಮತ್ತೆ ನೌಕೆಯ ಸಂವಹನ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com