ರಾಹುಲ್ ಗಾಂಧಿ
ದೇಶ
ಇಸ್ರೋ ಕಾರ್ಯ ಅತ್ಯದ್ಭುತ: ವಿಜ್ಞಾನಿಗಳಿಗೆ ರಾಹುಲ್ ಗಾಂಧಿ ಅಭಿನಂದನೆ
ಚಂದ್ರಯಾನ – 2 ಕಾರ್ಯಾಚರಣೆ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿಜ್ಞಾನಿಗಳ ಅದ್ಭುತ ಕಾರ್ಯಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.
ನವದೆಹಲಿ: ಚಂದ್ರಯಾನ-2 ಕಾರ್ಯಾಚರಣೆ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿಜ್ಞಾನಿಗಳ ಅದ್ಭುತ ಕಾರ್ಯಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.
ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗುವ ಪ್ರಕ್ರಿಯೆಯ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ಬಳಿಕ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಇಸ್ರೋ ತಂಡದ ಮಹತ್ವದ ಕಾರ್ಯಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನಿಮ್ಮ ಉತ್ಸಾಹ ಮತ್ತು ಸಮರ್ಪಣೆಯು ಪ್ರತಿ ಭಾರತೀಯನಿಗೆ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗುವುದಿಲ್ಲ. ಇನ್ನೂ ಅನೇಕ ದಾಖಲೆ ಮಾಡುವ ಮತ್ತು ಮಹತ್ವಾಕಾಂಕ್ಷೆಯ ಭಾರತೀಯ ಬಾಹ್ಯಾಕಾಶ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ