ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ದಾಳಿಗೆ ಹೆಣ್ಣು ಮಗು ಸೇರಿ 4 ಮಂದಿ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ಮನಬಂದಂತೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹೆಣ್ಣು ಮಗು ಸೇರಿ ಒಟ್ಟು 4 ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ಸೊಪೋರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸೊಪೋರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ಮನಬಂದಂತೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹೆಣ್ಣು ಮಗು ಸೇರಿ ಒಟ್ಟು 4 ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ಸೊಪೋರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 

ಸೊಪೋರ್ ಜಿಲ್ಲೆ ದಂಗೇರ್ಪೊರಾ ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಉಸ್ಮಾ ಜಾನ್ ಗಾಯಗೊಂಡಿರುವ ಹೆಣ್ಣು ಮಗುವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಸ್ತುತ ಸ್ಥಳಕ್ಕಾಗಮಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಉಗ್ರರಿಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com