ಏಳು-ಬೀಳು ಇದ್ದದ್ದೇ, ಇದೇನು ಕಡಿಮೆ ಸಾಧನೆಯಲ್ಲ: ಇಸ್ರೋ ವಿಜ್ಞಾನಿಗಳ ಬೆನ್ನುತಟ್ಟಿದ ಪ್ರಧಾನಿ ಮೋದಿ

ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕೊಠಡಿಯ ಸಂಪರ್ಕ ಕಡಿತಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದು, ನೀವು ಅತ್ಯುತ್ತಮ ಸೇವೆ ಸಲ್ಲಿಸಿದ್ದೀರಿ, ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ  ಪಡುತ್ತದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕೊಠಡಿಯ ಸಂಪರ್ಕ ಕಡಿತಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದು, ನೀವು ಅತ್ಯುತ್ತಮ ಸೇವೆ ಸಲ್ಲಿಸಿದ್ದೀರಿ, ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ  ಪಡುತ್ತದೆ ಎಂದು ಹೇಳಿದ್ದಾರೆ.

ವಿಕ್ರಂ ಲ್ಯಾಂಡರ್​ ಸಂಪರ್ಕ ಕಳೆದುಕೊಂಡ ನಂತರ ವಿಜ್ಞಾನಿಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ನಿಮ್ಮ ಈ ಶ್ರಮ ದೇಶಕ್ಕೆ ಸಾಕಷ್ಟು ಪಾಠ ಕಲಿಸಿದೆ. ನನ್ನ ಕಡೆಯಿಂದ ನಿಮಗೆ ಶುಭ ಕೋರುತ್ತೇನೆ. ನೀವು ನಿಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದೀರಿ. ನಾನು ನಿಮ್ಮ  ಬೆಂಬಲಕ್ಕೆ ನಿಂತಿದ್ದೇನೆ. ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ. ನಾವು ಧೈರ್ಯದಿಂದ ಮುನ್ನಡೆಯೋಣ ಎಂದು ತಿಳಿಸಿ ವಿಜ್ಞಾನಿಗಳ ಪ್ರಯತ್ನವನ್ನು ಶ್ಲಾಘಿಸಿ ಅವರಿಗೆ ಧೈರ್ಯ ತುಂಬಿದರು. 

ಪೀಣ್ಯದ ಇಸ್ರೊ ಕೇಂದ್ರದಲ್ಲಿ ಶನಿವಾರ ನಸುಕಿನಲ್ಲಿ ಚಂದ್ರಯಾನ-2 ವ್ಯೋಮ ನೌಕೆಯ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಯಂತೆ ಇಳಿದರೂ, ಅದರಿಂದ ಸಂದೇಶ ಬಾರದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಸಾಂತ್ವನದ ಮಾತುಗಳನ್ನು ಹೇಳಿದರು. ಬಳಿಕ ಇಸ್ರೊ ಆಧ್ಯಕ್ಷರನ್ನು  ಬೆನ್ನು ತಟ್ಟಿ ಸಮಾಧಾನಪಡಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ ಮೋದಿ, ಅವರೊಂದಿಗೆ ಫೋಟೋಗೆ ಪೋಸ್ ನೀಡಿದರು. ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ. ಅವರು ಅತ್ಯುತ್ತಮವಾದದ್ದನ್ನು ನೀಡಿದ್ದಾರೆ ಮತ್ತು  ಯಾವಾಗಲೂ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ. ಏಳು-ಬೀಳು ಇದ್ದದ್ದೇ, ಇದೇನು ಕಡಿಮೆ ಸಾಧನೆಯಲ್ಲ ಎಂದು ಪ್ರಧಾನಿ ಮೋದಿ ವಿಜ್ಞಾನಿಗಳ ಬೆಂಬಲ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com