ಕೊನೆಗೂ 'ವಿಕ್ರಮ್' ಲ್ಯಾಂಡರ್ ಪತ್ತೆ ಹಚ್ಚಿದ ಇಸ್ರೋ, ಸಂಪರ್ಕ ಸಾಧಿಸುವ ಭರವಸೆ ವ್ಯಕ್ತಪಡಿಸಿದ ಕೆ. ಸಿವನ್!

ಭಾರತದ ಮಹತ್ವದ ಯೋಜನೆಯಾಗಿದ್ದ ಚಂದ್ರಯಾನ-2ರ ಕೊನೆಯ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು. ಇದೀಗ ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚುವಲ್ಲಿ ಇಸ್ರೋ ಯಶಸ್ವಿಯಾಗಿದೆ.
ವಿಕ್ರಮ್ ಲ್ಯಾಂಡರ್
ವಿಕ್ರಮ್ ಲ್ಯಾಂಡರ್

ಬೆಂಗಳೂರು: ಭಾರತದ ಮಹತ್ವದ ಯೋಜನೆಯಾಗಿದ್ದ ಚಂದ್ರಯಾನ-2ರ ಕೊನೆಯ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು. ಇದೀಗ ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚುವಲ್ಲಿ ಇಸ್ರೋ ಯಶಸ್ವಿಯಾಗಿದೆ. 

ಚಂದಿರನಲ್ಲಿ ಲ್ಯಾಂಡ್ ಆಗಿರುವ ವಿಕ್ರಮ್ ಲ್ಯಾಂಡರ್ ನ ಚಿತ್ರಗಳು ಇಸ್ರೋಗೆ ಲಭ್ಯವಾಗಿವೆ. ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ವಿಕ್ರಮ್ ಲ್ಯಾಂಡರ್ ನ ಛಾಯಾಚಿತ್ರಗಳನ್ನು ಬೆಂಗಳೂರಿನ ಇಸ್ರೋ ನಿಯಂತ್ರಣ ಕೊಠಡಿಗೆ ರವಾನಿಸಿದೆ. 

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಿರೋದು ಪತ್ತೆಯಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ಹೇಳಿದ್ದಾರೆ. ಸದ್ಯ ಆರ್ಬಿಟರ್ ಸೆರೆ ಹಿಡಿದಿರುವ ವಿಕ್ರಮ್ ಲ್ಯಾಂಡರ್ ನ ಫೋಟೋಗಳು ಹಾಗೂ ಮಾಹಿತಿಯನ್ನು ಪರಿಶೀಲನೆ ನಡೆಸುತ್ತೇವೆ. ಆದಷ್ಟು ಬೇಗ ವಿಕ್ರಮ್ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com