ರಾಮ್ ಜೇಠ್ಮಲಾನಿ ನಿಧನ; ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಭಾನುವಾರ ನಿಧನರಾದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾನುವಾರ ನಿಧನರಾದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, ಜೇಠ್ಮಲಾನಿ ಅವರ ನಿಧನ ನಿಜಕ್ಕೂ ನೋವು ತಂದಿದೆ. ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಯಾವುದೇ ಮುಲಾಜಿಲ್ಲದೇ ಹೇಳುತ್ತಿದ್ದ ಅವರ ಗುಣ ಅಪರೂಪವಾದದ್ದು. ಅವರ ನಿಧನದಿಂದಾಗಿ ದೇಶ ಶ್ರೇಷ್ಠ ನ್ಯಾಯಶಾಸ್ತ್ರಜ್ಞನನ್ನು ಕಳೆದುಕೊಂಡಿದೆ ಎಂದು ಕೋವಿಂದ್ ಟ್ವೀಟ್ ಮಾಡಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮ್ಮ ಬುದ್ದಿಯಿಂದಲೇ ಮಾತನಾಡುತ್ತಿದ್ದ ಪಂಡಿತನನ್ನು ದೇಶ ಕಳೆದುಕೊಂಡಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರವನ್ನು ಖಂಡಿಸುತ್ತಿದ್ದ ಅವರ ಕಾರ್ಯ ವೈಖರಿ ಹಲವರಿಗೆ ಆದರ್ಶವಾಗಿತ್ತು. ಸಾಕಷ್ಚು ಜನರಿಗೆ ರಾಮ್ ಜೇಠ್ಮಲಾನಿ ಸಹಾಯ ಮಾಡಿದ್ದು, ಇದು ಅವರ ಜೀವನದ ಅಂಗವೇ ಆಗಿತ್ತು. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com