ಆಂಧ್ರಪ್ರದೇಶದಲ್ಲಿ ಹೈ ಡ್ರಾಮಾ: ಚಂದ್ರಬಾಬು ನಾಯ್ಡು, ಪುತ್ರ ಲೋಕೇಶ್'ಗೆ ಗೃಹ ಬಂಧನ

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸುತ್ತಿದ್ದಂತೆಯೇ ರಾಜಕೀಯಯ ಹೈಡ್ರಾಮಾ ಆರಂಭವಾಗಿದೆ. 
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಲೋಕೇಶ್
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಲೋಕೇಶ್

ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸುತ್ತಿದ್ದಂತೆಯೇ ರಾಜಕೀಯಯ ಹೈಡ್ರಾಮಾ ಆರಂಭವಾಗಿದೆ. 

ಸರ್ಕಾರದ ವಿರುದ್ದ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯುವ ಸಲುವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ನಾರಾ ಲೋಕೇಶ್ ಸೇರಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಹಲವು ನಾಯಕರಿಗೆ ಗೃಹ ಬಂಧನ ವಿಧಿಸಲಾಗಿದೆ. 

ಚಂದ್ರಬಾಬು ಅವರನ್ನು ಅವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದ್ದು, ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಾಯ್ಡು ಅವರ ನಿವಾಸದ ಹೊರಗೆ ಜಮಾಯಿಸಿದ್ದ ಟಿಡಿಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಬಳಿಕ ಆಂಧ್ರಪ್ರದೇಶ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ ಗೊಂಡಿದೆ. 

ಆಡಳಿತಾರೂಢ ಸರ್ಕಾರ ಮಾನವ ಹಕ್ಕು ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಸರ್ಕಾರ ಹಾಗೂ ಪೊಲೀಸರಿಗೆ ಎಚ್ಚರಿಸುತ್ತಿದ್ದೇನೆ, ಈ ರೀತಿಯ ರಾಜಕೀಯ ಮಾಡುವುದು ಸರಿಯಲ್ಲ. ಬಂಧನದಿಂದ ನಮ್ಮನ್ನು ನಿಯಂತ್ರಿಸಲು ನಿಮಗೆ ಸಾಧ್ಯವಿಲ್ಲ. ಅವಕಾಶ ಸಿಕ್ಕಾಗ ನಾನು ಮತ್ತೆ ಪ್ರತಿಭಟಿಸುತ್ತೇನೆಂದು ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com