ಉನ್ನಾವೊ ಪ್ರಕರಣ: ಏಮ್ಸ್ ನಲ್ಲಿ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆ ದಾಖಲು 

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಉನ್ನಾವೊ ರೇಪ್ ಸಂತ್ರಸ್ತೆಯ ಹೇಳಿಕೆಯನ್ನು ಬುಧವಾರ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯ ದಾಖಲಿಸಿಕೊಂಡಿದೆ. 
ಆರೋಪಿ ಕುಲದೀಪ್ ಸಿಂಗ್ ಸೆಂಗರ್
ಆರೋಪಿ ಕುಲದೀಪ್ ಸಿಂಗ್ ಸೆಂಗರ್

ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಉನ್ನಾವೊ ರೇಪ್ ಸಂತ್ರಸ್ತೆಯ ಹೇಳಿಕೆಯನ್ನು ಬುಧವಾರ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯ ದಾಖಲಿಸಿಕೊಂಡಿದೆ.


ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗರ್ ನನ್ನು ತಿಹಾರ್ ಜೈಲ್ ನಿಂದ ಕೋರ್ಟ್ ವಿಚಾರಣೆಗೆ ಏಮ್ಸ್ ಆಸ್ಪತ್ರೆಗೆ ಕರೆತರಲಾಯಿತು. ವಿಶೇಷ ನ್ಯಾಯಾಧೀಶ ಧರ್ಮೇಶ್ ಶರ್ಮ ಆಘಾತ ಕೇಂದ್ರದೊಳಗೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು.


ವಿಚಾರಣೆ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸಿಬಿಐ ಆಸ್ಪತ್ರೆ ಆವರಣದಲ್ಲಿ ವಿಶೇಷ ಭದ್ರತೆ ಏರ್ಪಡಿಸಲಾಗಿತ್ತು. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ತ್ವರಿತ ವಿಚಾರಣೆಯನ್ನು ಜೈ ಪ್ರಕಾಶ್ ನಾರಾಯಣ ಅಪೆಕ್ಸ್ ಟ್ರಾಮಾ ಸೆಂಟರ್ ನ ಒಳಗೆ ನಡೆಸುವಂತೆ ಆದೇಶ ನೀಡಿದ್ದರು.  


2017ರಲ್ಲಿ ಅಪ್ರಾಪ್ತೆಯಾಗಿದ್ದಾಗ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆದಿದ್ದು ಕಳೆದ ಜುಲೈ 28ರಂದು ರಾಯ್ ಬರೇಲಿಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com