ನಮಗೆ 'ಮೂರ್ಖ' ಸಿದ್ಧಾಂತಗಳ ಅಗತ್ಯವಿಲ್ಲ: ನಿರ್ಮಲಾ ಸೀತಾರಾಮನ್ ಗೆ ರಾಹುಲ್ ತಿರುಗೇಟು

ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.


ಆಟೊಮೊಬೈಲ್ ವಲಯದಲ್ಲಿ ಕುಸಿತ ಕಂಡುಬಂದಿರುವುದಕ್ಕೆ ಕಾರಣವೇನು ಎಂದು ವಿಶ್ಲೇಷಿಸುತ್ತಾ ಮೊನ್ನೆ ಚೆನ್ನೈಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಭಾರತಕ್ಕೆ ಇಲ್ಲಸಲ್ಲದ ಪ್ರಚಾರಗಳು, ಈಗಿನ ಕಾಲದ ಜನರ ಬಗ್ಗೆ ಪ್ರಚೋದನಾಕಾರಿ ಸುದ್ದಿಗಳು, ಮೂರ್ಖ ಸಿದ್ದಾಂತಗಳು ಬೇಕಿಲ್ಲ, ತಳಮಟ್ಟದ ವಾಸ್ತವ ಯೋಜನೆಗಳನ್ನು ರೂಪಿಸಿ ಆರ್ಥಿಕತೆಯನ್ನು ಸರಿಪಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. 


ಕೊನೆಗೂ ಸರ್ಕಾರ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿರುವುದು ಸಮಾಧಾನಕರ ಸಂಗತಿ. ನಮ್ಮ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು ಆರಂಭದ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಸಂದರ್ಶನವನ್ನು ಟ್ಯಾಗ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com