ಐಎನ್ಎಕ್ಸ್ ಮೀಡಿಯಾ ಕೇಸು; ಸಿಬಿಐಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್ 

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಕೇಸಿನಲ್ಲಿ ತಿಹಾರ ಜೈಲು ಸೇರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರ ಅರ್ಜಿ ಬಗ್ಗೆ ದೆಹಲಿ ಹೈಕೋರ್ಟ್ ಸಿಬಿಐ ಪ್ರತಿಕ್ರಿಯೆ ಕೇಳಿದೆ. 
ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಕೇಸಿನಲ್ಲಿ ತಿಹಾರ ಜೈಲು ಸೇರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರ ಅರ್ಜಿ ಬಗ್ಗೆ ದೆಹಲಿ ಹೈಕೋರ್ಟ್ ಸಿಬಿಐ ಪ್ರತಿಕ್ರಿಯೆ ಕೇಳಿದೆ.


ಇದು ರಾಜಕೀಯ ಪ್ರೇರಿತ ಕೇಸು, ಹೀಗಾಗಿ ತಮ್ಮನ್ನು ಪ್ರಕರಣದಿಂದ ಮುಕ್ತಿಗೊಳಿಸಬೇಕೆಂದು ಕೋರಿ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕೈಟ್, ಇಂದು ಸಿಬಿಐಗೆ ನೊಟೀಸ್ ಜಾರಿ ಮಾಡಿದ್ದಾರೆ.


ಸೆಪ್ಟೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುವ ತ್ವರಿತ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಚಿದಂಬರಂ ಹಿಂತೆಗೆದುಕೊಂಡಿದ್ದಾರೆ. 


ಮುಂದಿನ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com