ಐಎನ್ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಕೋರ್ಟ್ ನಿಂದ ಚಿದಂಬರಂ ಜಾಮೀನು ಅರ್ಜಿ ವಜಾ

ಐಎನ್‌ಎಕ್ಸ್ ಮೀಡಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಕೋರಿ ದೆಹಲಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಐಎನ್‌ಎಕ್ಸ್ ಮೀಡಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಕೋರಿ ದೆಹಲಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಈ ಹಿಂದೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿರುವ 14 ದಿನಗಳ ನ್ಯಾಯಾಂಗ ಬಂಧವವನ್ನು ಪ್ರಶ್ನಿಸಿ ಅವರು ದೆಹಲಿ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ಅಜಯ್ ಕುಮಾರ್ ಕುಹರ್ ಅವರು, ಇಡಿ ಪರ ವಕೀಲರ ವಾದಕ್ಕೆ ಮಾನ್ಯತೆ ನೀಡಿ ಚಿದಂಬರಂ ಅವರ ಅರ್ಜಿ ವಜಾಗೊಳಿಸಿದ್ದಾರೆ.

ಈ ಹಿಂದಿನ ವಿಚಾರಣೆಯಲ್ಲಿ ಚಿದಂಬರಂ ಹೊಂದಿರುವ ಸ್ಥಾನ ಮಾನವು ವಿಚಾರಣೆಗೆ ಅಡ್ಡಿ ಮಾಡುವ ಸಾಧ್ಯತೆಯಿದೆ ಎಂದು ಸಿಬಿಐ ಆತಂಕ ವ್ಯಕ್ತಪಡಿಸಿತ್ತು. ಚಿದಂಬರಂ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾಗಿರುವ ಕಾರಣ ಅವರನ್ನು ವಶಕ್ಕೆ ನೀಡಲಾಗುತ್ತಿದೆ ಎಂದು ವಿಚಾರಣಾ ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com