ಸಾಮಾಜಿಕ ತಾಣ ಖಾತೆಗೆ ಆಧಾರ್ ಜೋಡಣೆಗಾಗಿ ಮಾರ್ಗಸೂಚಿ ಇದೆಯೇ: ಕೇಂದ್ರಕ್ಕೆ 'ಸುಪ್ರೀಂ' ಪ್ರಶ್ನೆ

ಸಾಮಾಜಿಕ ತಾಣದಲ್ಲಿನ ಪ್ರೊಫೈಲ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯವನ್ನು ಶೀಘ್ರವಾಗಿ ತೀರ್ಮಾನಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ ಆಧಾರ್ ಅನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ವಾಟ್ಸ್ ಆ್ಯಪ್‌ನೊಂದಿಗೆ ಜೋಡಿಸಲು ಯಾವುದಾದರೂ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತಿದೆಯೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ

Published: 13th September 2019 04:35 PM  |   Last Updated: 13th September 2019 04:35 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : The New Indian Express

ನವದೆಹಲಿ: ಸಾಮಾಜಿಕ ತಾಣದಲ್ಲಿನ ಪ್ರೊಫೈಲ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯವನ್ನು ಶೀಘ್ರವಾಗಿ ತೀರ್ಮಾನಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ ಆಧಾರ್ ಅನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ವಾಟ್ಸ್ ಆ್ಯಪ್‌ನೊಂದಿಗೆ ಜೋಡಿಸಲು ಯಾವುದಾದರೂ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತಿದೆಯೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ 

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, "ಈ ಹಂತದಲ್ಲಿ ನಾವು ಈ ವಿಷಯವನ್ನು ನಿರ್ಧರಿಸಬಹುದೇ ಅಥವಾ ಹೈಕೋರ್ಟ್ ನಿರ್ಧರಿಸುತ್ತೇವೆಯೇ ಎಂದು ನಮಗೆ ತಿಳಿದಿಲ್ಲ" ಎಂದು ಹೇಳಿದರು.ಇದು ಪ್ರಕರಣದ ಯೋಗ್ಯತೆಗೆ ಸಂಬಂಧಿಸಿದ್ದಲ್ಲ. ಮತ್ತು  ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳ ಮುಂದೆ ಬಾಕಿ ಇರುವ ಇಂತಹ ಪ್ರಕರಣಗಳನ್ನು ಉನ್ನತ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಫೇಸ್‌ಬುಕ್ ಸಲ್ಲಿಸಿದ ವರ್ಗಾವಣೆ ಅರ್ಜಿಯನ್ನು ಸರಳವಾಗಿ ತೀರ್ಮಾನಿಸುವುದಾಗಿ ನ್ಯಾಯಪೀಠ ಹೇಳಿದೆ.

ಈ ಸಂಬಂಧದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ನಿಗದಿಪಡಿಸಿದೆ. 

ಇದೇ ವೇಳೆ ಪ್ರಕರಣಗಳನ್ನು ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಲು ಯಾವ ಆಕ್ಷೇಪವಿಲ್ಲ ಎಂದು ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

ಫೇಸ್‌ಬುಕ್ ಇಂಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ಕಂಪನಿಗಳು ಭಾರತೀಯ ಕಾನೂನುಗಳನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೊಂಡಿದ್ದು ಇದರ ಪರಿಣಾಮ "ಕಾನೂನುಬಾಹಿರ ಘಟನೆ" ಹೆಚ್ಚುತ್ತಿದ್ದು  "ಅಪರಾಧಗಳನ್ನು ಪತ್ತೆಹಚ್ಚುವಲ್ಲಿ" ತೊಂದರೆಗಳಿವೆ ಎಂದು ಅಭಿಪ್ರಾಯಪಟ್ಟಿದೆ.

ಸಾಮಾಜಿಕ ತಾಣದ ಪ್ರೊಫೈಲ್‌ಗಳನ್ನು ಬಯೋಮೆಟ್ರಿಕ್ ಐಡಿ ಆಧಾರ್‌ನೊಂದಿಗೆ ಸಂಪರ್ಕಿಸುವ ಮನವಿಯ ವಿಚಾರಣೆಯನ್ನು ಮುಂದುವರೆಸುವಂತೆ ಮದ್ರಾಸ್ ಹೈಕೋರ್ಟ್‌ಗೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್‌ಆಗಸ್ಟ್ 20 ರ ಆದೇಶವನ್ನು ಮಾರ್ಪಡಿಸಲು ಹೇಳಿದ್ದರೂ ಸಹ ಯಾವುದೇ ಪರಿಣಾಮಕಾರಿ ಆದೇಶಗಳನ್ನು ನೀಡಿಲ್ಲ. ಸಾಮಾಜಿಕ ಮಾಧ್ಯಮ ಖಾತೆಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಸಂಬಂಧಿಸಿದ ಪ್ರಕರಣಗಳನ್ನು ವರ್ಗಾವಣೆ ಮಾಡುವಂತೆ ಕೋರಿ, ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಸುಪ್ರೀಂ ಕೋರ್ಟ್‌ಗೆ ಕೇಂದ್ರ, ಗೂಗಲ್, ವಾಟ್ಸಾಪ್, ಟ್ವಿಟರ್, ಯೂಟ್ಯೂಬ್ ಮತ್ತು ಇತರರಿಂದ ಆಗಸ್ಟ್ 20 ರಂದು ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೋರಿತ್ತು. .ಒಟ್ತಾರೆ ಮದ್ರಾಸ್ ಹೈಕೋರ್ಟ್‌ನಲ್ಲಿ ಎರಡು, ಬಾಂಬೆಯಲ್ಲಿ ಒಂದು ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಒಂದು ಸೇರಿದಂತೆ ನಾಲ್ಕು ಅರ್ಜಿಗಳಿವೆ. ಅದರಲ್ಲಿ ಬಹುತೇಕ ಒಂದೇ ರೀತಿಯ ಬೇಡಿಕೆ ಇದೆ ಎಂದು ದು ಫೇಸ್‌ಬುಕ್ ಇಂಕ್ ವಾದಿಸಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp