ಪಾಕಿಸ್ತಾನೀಯರ ಕುರಿತು ತಪ್ಪು ಮಾಹಿತಿ, ವಿಧಿ 370ರ ರದ್ಧತಿ ಸರಿಯಲ್ಲ: ಶರದ್ ಪವಾರ್

ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನದ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಪಾಕಿಸ್ತಾನೀಯರ ಕುರಿತು ತಪ್ಪು ಮಾಹಿತಿ, ವಿಧಿ 370ರ ರದ್ಧತಿ ಸರಿಯಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

Published: 15th September 2019 11:39 AM  |   Last Updated: 15th September 2019 11:39 AM   |  A+A-


NCP chief Sharad Pawar

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಮುಂಬೈ: ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನದ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಪಾಕಿಸ್ತಾನೀಯರ ಕುರಿತು ತಪ್ಪು ಮಾಹಿತಿ, ವಿಧಿ 370ರ ರದ್ಧತಿ ಸರಿಯಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಮುಂಬೈನಲ್ಲಿ ಅಲ್ಪ ಸಂಖ್ಯಾತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶರದ್ ಪವಾರ್, ಬಿಜೆಪಿ ತನ್ನ ರಾಜಕೀಯಕ್ಕಾಗಿ ಪಾಕಿಸ್ತಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪಾಕಿಸ್ತಾನದ ಕುರಿತು ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಾ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾನು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿನ ಜನರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಅವರು ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತಾರೆ ಎಂದು ಹೇಳಿದ್ದಾರೆ. ಅಂತೆಯೇ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿದ ಪವಾರ್, ವಿಧಿ 370ರ ರದ್ಧತಿ ಮೂಲಕ ಅಲ್ಪ ಸಂಖ್ಯಾತರಲ್ಲಿ ಭಯದ ವಾತಾವರಣ ಮೂಡಿಸಿದೆ. ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ ಕಣಿವೆಯಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗಲು ಎಡೆ ಮಾಡುಕೊಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp