ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಖ್ ಬಂಧನ: ಕಾಂಗ್ರೆಸ್ ಖಂಡನೆ

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ  ಇಂತಹ ನಾಯಕರನ್ನು ಬಂಧಿಸಿರುವುದು ದುರದೃಷ್ಟ ಎಂದು ಕಾಂಗ್ರೆಸ್ ಹೇಳಿದೆ. 
ಫಾರೂಖ್ ಅಬ್ದುಲ್ಲಾ
ಫಾರೂಖ್ ಅಬ್ದುಲ್ಲಾ

ನವದೆಹಲಿ:ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ  ಇಂತಹ ನಾಯಕರನ್ನು ಬಂಧಿಸಿರುವುದು ದುರದೃಷ್ಟ ಎಂದು ಕಾಂಗ್ರೆಸ್ ಹೇಳಿದೆ. 

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಖ್ ಅವರನ್ನು ಬಂಧಿಸಲಾಗಿದೆ. ಈ ಕಾಯ್ದೆ ಪ್ರಕಾರ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಬಂಧನದಲ್ಲಿಡಲು ಸಂಬಂಧಿಸಿದ ಸಂಸ್ಥೆಗಳಿಗೆ ಅಧಿಕಾರವಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆಯ 

 ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜನಿಸಿದ ನಂತರ ಆಗಸ್ಟ್  5 ರಿಂದಲೂ ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ಮುಖಂಡ 81 ವರ್ಷದ ಫಾರೂಖ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ, 

ಕಾಶ್ಮೀರದ ಅತ್ಯಂತ ಹಳೆಯ ರಾಜಕೀಯ ಪಕ್ಷವೊಂದರ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಯಾಗಿರುವ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದು ದುರದೃಷ್ಟಕರವಾಗಿದ್ದು, ತೀವ್ರವಾಗಿ ಖಂಡಿಸುವುದಾಗಿ ರಾಜ್ಯಸಭೆಯಲ್ಲಿನ ಪ್ರತಿಪಕ್ಷಗಳ ನಾಯಕ ಗುಲಾಂ ನಬೀ ಅಜಾದ್ ಹೇಳಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ , ಕಾಂಗ್ರೆಸ್ ಉಗ್ರರ ವಿರುದ್ಧ ಹೋರಾಡಿವೆ.  ಇಂದು ಉಗ್ರರ ಉಪಟಳ ಕಡಿಮೆಯಾಗಿರುವುದಕ್ಕೆ ಈ ಪಕ್ಷಗಳೇ ಕಾರಣ ಹೊರತು ಬಿಜೆಪಿ ಅಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com