ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ತಲಾ 125 ಸ್ಥಾನಗಳಲ್ಲಿ ಕಾಂಗ್ರೆಸ್, ಎನ್ ಸಿಪಿ ಸ್ಪರ್ಧೆ

ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ತಲಾ 125 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

Published: 16th September 2019 05:58 PM  |   Last Updated: 16th September 2019 05:58 PM   |  A+A-


Sharad Pawar

ಶರದ್ ಪವಾರ್

Posted By : Lingaraj Badiger
Source : PTI

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ತಲಾ 125 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವೆ ಸ್ಥಾನ ಹೊಂದಾಣಿಕೆ ಅಂತಿಮವಾಗಿದ್ದು, ಇತರೆ ಮಿತ್ರ ಪಕ್ಷಗಳಿಗೆ ಉಳಿದ 38 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

ಈ ಬಾರಿ ಎನ್ ಸಿಪಿ ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎಂದಿರುವ ಪವಾರ್ ಅವರು, ಕೆಲವು ಕ್ಷೇತ್ರಗಳನ್ನು ಕಾಂಗ್ರೆಸ್ ಜತೆ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಒಟ್ಟು 288 ಸ್ಥಾನಗಳನ್ನು ಹೊಂದಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 42 ಕ್ಷೇತ್ರಗಳಲ್ಲಿ ಹಾಗೂ 41 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. 122 ಸ್ಥಾನಗಳನ್ನು ಪಡೆದ ಬಿಜೆಪಿ, ಶಿವಸೇನೆ ಜತೆ ಸೇರಿ ಸರ್ಕಾರ ರಚಿಸಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp