ಸಾರ್ವಜನಿಕ ಭದ್ರತಾ ಕಾಯ್ದೆಯಡಿ ಕಾಶ್ಮೀರ ಮಾಜಿ ಸಿಎಂ ಫಾರೂಕ್​ ಅಬ್ದುಲ್ಲಾ ಬಂಧನ

ಪ್ರಮುಖ ಬೆಳವಣಿಗೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರನ್ನು ಸೋಮವಾರ ಸಾರ್ವಜನಿಕ ಭದ್ರತಾ ಕಾಯ್ದೆ(ಪಿಎಸ್ಎ) ಅಡಿ ಬಂಧಿಸಲಾಗಿದೆ.
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ

ಶ್ರೀನಗರ: ಪ್ರಮುಖ ಬೆಳವಣಿಗೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರನ್ನು ಸೋಮವಾರ ಸಾರ್ವಜನಿಕ ಭದ್ರತಾ ಕಾಯ್ದೆ(ಪಿಎಸ್ಎ) ಅಡಿ ಬಂಧಿಸಲಾಗಿದೆ.

ಶ್ರೀನಗರದ ಹಾಲಿ ಸಂಸದರಾಗಿರುವ ಫಾರೂಕ್ ಅಬ್ದುಲ್ಲಾ ಅವರ ಶ್ರೀನಗರದಲ್ಲಿರುವ ನಿವಾಸವನ್ನೇ ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ಅವರನ್ನು ಅಲ್ಲಿರಿಸಲಾಗಿದೆ.

ಫಾರೂಕ್​ ಅಬ್ದುಲ್ಲಾ ಅವರ ತಂದೆ ಶೇಖ್​ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿದ್ದಾಗ ಸಾರ್ವಜನಿಕ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು. ಈ ಕಾಯ್ದೆಯ ಪ್ರಕಾರ, ಬಂಧಿತ ವ್ಯಕ್ತಿಯನ್ನು ಯಾವುದೇ ವಿಚಾರಣೆ ಇಲ್ಲದೆ 2 ವರ್ಷಗಳ ಕಾಲ ಜೈಲಿನಲ್ಲಿಡಲು ಅವಕಾಶವಿದೆ.

ಈ  ಮಧ್ಯ, ಫಾರೂಕ್ ಅಬ್ದುಲ್ಲಾ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ತಕ್ಷಣವೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಬೇಕು ಎಂದು ಕೋರಿ ಎಂಡಿಎಂಕೆ ನಾಯಕ ವೈಕೋ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ಸುಪ್ರೀಂ ಕೋರ್ಟ್​, ಈ ಸಂಬಂಧ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com