ಕಾಶ್ಮೀರ ಭೇಟಿಗೆ ಅನುಮತಿ ನೀಡಿದ ಸುಪ್ರೀಂಕೋರ್ಟ್'ಗೆ ಧನ್ಯವಾದ: ಗುಲಾಂ ನಬಿ ಆಜಾದ್

ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಅವಕಾಶ ಮಾಡಿಕೊಟ್ಟ ಸುಪ್ರೀಂಕೋರ್ಟ್'ಗೆ ಧನ್ಯವಾದಗಳು ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಸೋಮವಾರ ಹೇಳಿದ್ದಾರೆ. 
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಅವಕಾಶ ಮಾಡಿಕೊಟ್ಟ ಸುಪ್ರೀಂಕೋರ್ಟ್'ಗೆ ಧನ್ಯವಾದಗಳು ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಸೋಮವಾರ ಹೇಳಿದ್ದಾರೆ. 

ಈ ಹಿಂದೆ ಗುಲಾಂ ನಬಿ ಆಜಾದ್ ಅವರು ಮೂರು ಬಾರಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಪ್ರಯತ್ನಿಸಿದ್ದರು. ಆದರೆ, ವಿಮಾನ ನಿಲ್ದಾಣದಿಂದ ವಾಪಸ್ಸು ಕಳುಹಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಗುಲಾಂ ನಬಿ ಆಜಾದ್ ತಮ್ಮ ಕುಟುಂಬ ವರ್ಗದವರನ್ನು ಮತ್ತು ಸಂಬಂಧಿಕರನ್ನು ಸಹ ಭೇಟಿ ಮಾಡಲು ಅವಕಾಶ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಗುಲಾಂ ನಬಿ ಆಜಾದ್ ಅವರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿದೆ. 

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಗುಲಾಂ ನಬಿ ಆಜಾದ್ ಅವರು, ಅನುಮತಿ ನೀಡಿದ್ದಕ್ಕೆ ಸುಪ್ರೀಂಕೋರ್ಟ್'ಗೆ ಧನ್ಯನಾಗಿದ್ದೇನೆ. ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇನೆ. ಮುಖ್ಯ ನ್ಯಾಯಮೂರ್ತಿಗಲು ನನ್ನ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ಸಂತೋಷವಾಗಿದೆ. ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com