ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, 4 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. 

ಕಳೆದ ರಾತ್ರಿ ಮೆಂಧಾರ್ ಸೆಕ್ಟರ್'ನ ಬಾಲಾಕೋಟ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ದಾಳಿಯಲ್ಲಿ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದ ಬಳಿಕ ಪಾಕಿಸ್ತಾನ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com