ಸೆ. 20ರಂದು ಎಡ ಪಕ್ಷಗಳ ರಾಷ್ಟ್ರೀಯ ಸಮಾವೇಶ

ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.


ಐದು ಎಡಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಷನ್, ಫಾರ್ವರ್ಡ್ ಬ್ಲಾಕ್‍ ಮತ್ತು ಆರ್ ಎಸ್‍ ಪಿ ಸಹಯೋಗದಲ್ಲಿ ಸೆಪ್ಟೆಂಬರ್ 20ರಂದು ದೆಹಲಿಯಲ್ಲಿ ಜಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.


ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಸಾರ್ಜಜನಿಕರ ಮೇಲೆ ಹೆಚ್ಚೆಚ್ಚು ಪ್ರಮಾಣದಲ್ಲಿ ಹೇರಲಾಗುತ್ತಿರುವ ಸಂಕಟಗಳು, ದೊಡ್ಡ ಪ್ರಮಾಣದ ಉದ್ಯೋಗ ನಷ್ಟದ ವಿರುದ್ಧ ರಾಷ್ಟ್ರ ಮಟ್ಟದ ಪ್ರತಿಭಟನೆಯನ್ನು ಕಾನ್ಸ್ಟಿಟ್ಯೂಷನ್ ಕ್ಲಬ್‍ ಸಭಾಂಗಣದಲ್ಲಿ ಏರ್ಪಡಿಸಲಾಗುವುದು ಎಂದು ಈ ಐದು ಎಡಪಕ್ಷಗಳು ಜಂಟಿ ಹೇಳಿಕೆಯಲ್ಲಿ ಪ್ರಕಟಿಸಿವೆ.


ಹಣಕಾಸು ಮಂತ್ರಿಗಳು ಇತ್ತೀಚೆಗೆ ಪ್ರಕಟಿಸಿರುವ 70 ಸಾವಿರ ಕೋಟಿ ರೂಪಾಯಿಗಳ ಬೃಹತ್‍ ಮೊತ್ತದ ಹಲವು ಕ್ರಮಗಳು ಜನರಿಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ, ಅವು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಲಿವೆ. ಮೂಲ ರಚನೆಗಳ ಮೇಲೆ ಸಾರ್ವಜನಿಕ ಹೂಡಿಕೆಗಳನ್ನು ಹೆಚ್ಚಿಸುವುದು, ಉದ್ಯೋಗಾವಕಾಶಗಳನ್ನು ನಿರ್ಮಿಸುತ್ತಲೇ ಜನರ ಕೈಯಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಬೇಕಾಗಿರುವುದು ಈಗಿನ ಅಗತ್ಯವಾಗಿದೆ ಎಂದು ಪಕ್ಷಗಳು ಹೇಳಿವೆ.


ಎಡಪಕ್ಷಗಳ ಈ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲ ಪ್ರಜಾಪ್ರಭುತ್ವವಾದಿ ಶಕ್ತಿಗಳು ಮುಂದೆ ಬಂದು ಜನತಾ ಆಂದೋಲನವನ್ನು ಬಲಪಡಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com