ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ? 

ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ತೈಲೋತ್ಪಾದನೆ ಕುಂಠಿತಗೊಂಡಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ತೈಲೋತ್ಪಾದನೆ ಕುಂಠಿತಗೊಂಡಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿವೆ. 

ದೇಶದಲ್ಲಿ ಮುಂದಿನ 15 ದಿನಗಳಲ್ಲಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ರೂ.5-6ರಷ್ಟು ಏರಿಕೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. 

ಸೋಮವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್'ಗೆ 72 ಡಾಲರ್'ಗೆ ತಲುಪಿದೆ. ಇದು ಹಿಂದಿನ ದರಕ್ಕಿಂತ ಶೇ.20ರಷ್ಟು ದುಬಾರಿಯಾಗಿದೆ. 

ಆದರೆ, ಸೌದಿ ಅರೇಬಿಯಾದಲ್ಲಿ ಉತ್ಪಾದನೆ ಕಂಠಿತಗೊಂಡಿದ್ದರೂ ಅದರಿಂದ ಭಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದು ದೇಶ. ನಮಗೆ ಅತಿ ಹೆಚ್ಚು ತೈಲ ಸರಬರಾಜು ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ನ.2 ಸ್ಥಾನದಲ್ಲಿದೆ. ಸೌದಿ ಸರ್ಕಾರದ ಅರಾಮ್ಕೋ ಅಧಿಕಾರಿಗಳೇ ಭಾರತಕ್ಕೆ ಯಾವುದೇ ಸಮಸ್ಯೆಯಾಗವುದಿಲ್ಲ ಎಂದು ಹೇಳಿದ್ದಾರೆ. ಅದಾಗ್ಯೂ ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ ಎಂದು ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com