ಸರ್ದಾರ್ ಸರೋವರ ಡ್ಯಾಂನಲ್ಲಿ ಆರತಿ ಬೆಳಗಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ 69ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ. 
ಸರ್ದಾರ್ ಸರೋವರ ಡ್ಯಾಂನಲ್ಲಿ ಆರತಿ ಬೆಳಗಿದ ಪ್ರಧಾನಿ ಮೋದಿ
ಸರ್ದಾರ್ ಸರೋವರ ಡ್ಯಾಂನಲ್ಲಿ ಆರತಿ ಬೆಳಗಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ 69ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.
 
ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದರು. ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. 

ಹೆಲಿಕಾಪ್ಟರ್ ನಲ್ಲಿ ಅಣೆಕಟ್ಟನ್ನು ವೀಕ್ಷಣೆ ಮಾಡಿದ ಮೋದಿಯವರು, ಸರ್ದಾರ್ ಪಟೇಲರ ಪ್ರತಿಮೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. 

 ಕಳೆದ ವರ್ಷ ಪ್ರಧಾನಿ ಮೋದಿಯವರು ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿನ ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು, ಬಳಿಕ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 

ಅಣೆಕಟ್ಟು ಭೇಟಿ ಬಳಿಕ ಮೋದಿಯವರು ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com