ಅಯೋಧ್ಯೆ ವಿವಾದ: ಅಕ್ಟೋಬರ್ 18 ಗಡುವು, ಮಾತುಕತೆ ಪ್ರಕ್ರಿಯೆ ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಅ.18ಕ್ಕೆ ಗಡುವು ನೀಡಿರುವ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮಂಗಳವಾರ ಸಮ್ಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಅ.18ಕ್ಕೆ ಗಡುವು ನೀಡಿರುವ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮಂಗಳವಾರ ಸಮ್ಮತಿ ನೀಡಿದೆ.

ಅಯೋಧ್ಯೆ ಭೂ ವಿವಾದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳ್ಳಬೇಕಾಗಿದೆ. ಒಂದು ವೇಳೆ ದೂರುದಾರರು ಇಚ್ಛಿಸಿದ್ದಲ್ಲಿ ಮಂದಿರ-ಮಸೀದಿ ವಿವಾದವನ್ನು ಮಧ್ಯಸ್ಥಿಗೆ ಮೂಲಕವೂ ಇತ್ಯರ್ಥಪಡಿಸಿಕೊಳ್ಳಬಹುದು. ಅ.18ರೊಳಗೆ ವಿಚಾರಣೆ ಪೂರ್ಣಗೊಳ್ಳಲೇಬೇಕಾಗಿದೆ. ಒಂದು ವೇಳೆ ದಿನಂಪ್ರತಿ ಒಂದು ಗಂಟೆ ಹೆಚ್ಚು ವಿಚಾರಣೆ ನಡೆಸಲು ಸಿದ್ಧ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರುದಾರರು ಮಧ್ಯಸ್ಥಿಕೆ ಮೂಲಕವೂಬ ಬಗೆಹರಿಸಿಕೊಳ್ಳಬಹುದು ಎಂದು 26ನೇ ದಿನದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತಿಳಿಸಿದೆ. 

ವಿವಾದ ಸಂಬಂಧ ಅ.18ರೊಳಗೆ ವಿಚಾರಣೆ ಪೂರ್ಣಗೊಳಿಸಿದರೆ, ಡಿಸೆಂಬರ್ ಅಂತ್ಯದೊಳಗೆ ನ್ಯಾಯಾಲಯ ತೀರ್ಪು ನೀಡಬಹುದು ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com