ರಕ್ತದೊತ್ತಡ ಹಾಗೂ ಹೃದಯ ಬೇನೆ: ಆರ್‌ಎಂಎಲ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ದಾಖಲು!

ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶದ ಬೆನ್ನಲ್ಲೇ ಡಿಕೆಶಿ ಅವರು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ನವದೆಹಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶದ ಬೆನ್ನಲ್ಲೇ ಡಿಕೆಶಿ ಅವರು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಅಲ್ಲದೆ 14 ದಿನಗಳ ಕಾಲ ಡಿಕೆಶಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದರು.

ಈ ವೇಳೆ ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸತತ ಎರಡು ಗಂಟೆಗಳ ತಪಾಸಣೆ ನಂತರ ಡಿಕೆ ಶಿವಕುಮಾರ್ ಅವರನ್ನು ತೀವ್ರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 

ಇನ್ನು ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ ಮಧ್ಯಾಹ್ನ ನಡೆಯಲಿದೆ. ಜಾಮೀನು ಸಿಕ್ಕರೆ ಬಿಡುಗಡೆಯಾಗಲಿದ್ದು ಇಲ್ಲದಿದ್ದರೆ ತಿಹಾರ್ ಜೈಲು ಪಾಲಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com