ಅಮೆರಿಕಾದಲ್ಲಿ ಪ್ರಧಾನಿ ಮೋದಿ, ಇಮ್ರಾನ್ ಖಾನ್ ಭೇಟಿ ಇಲ್ಲ: ಭಾರತ 

ಅಮೆರಿಕಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಅಧ್ಯಕ್ಷ ಇಮ್ರಾನ್ ಖಾನ್ ನಡುವೆ ಯಾವುದೇ ಭೇಟಿಗಳಿಲ್ಲ ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅಮೆರಿಕಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಅಧ್ಯಕ್ಷ ಇಮ್ರಾನ್ ಖಾನ್ ನಡುವೆ ಯಾವುದೇ ಭೇಟಿಗಳಿಲ್ಲ ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ. 

ನಿನ್ನೆಯಷ್ಟೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನ ಮತ್ತು ಭಾರತದ ಪ್ರಧಾನಮಂತ್ರಿಗಳು ಶೀಘ್ರದಲ್ಲಿಯೇ ಭೇಟಿಯಾಗಲಿದ್ದಾರೆಂದು ಹೇಳಿದ್ದರು. ಆದರೆ, ಎಲ್ಲಿ, ಯಾವಾಗ ಭೇಟಿಯಾಗಲಿದ್ದಾರೆಂಬುದನ್ನು ಬಹಿರಂಗಪಡಿಸಿರಲಿಲ್ಲ. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು, ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರ ಪ್ರಧಾನಮಂತ್ರಿಗಳ ನಡುವಣ ಯಾವುದೇ ರೀತಿಯ ಭೇಟಿಗಳ ಅವಕಾಶಗಳಿಲ್ಲ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ (ಯುಎನ್'ಜಿಎ) ಉಭಯ ರಾಷ್ಟ್ರಗಳ ನಡುವೆ ಸಭೆ ನಡೆಯುತ್ತದೆಯೋ, ಇಲ್ಲವೋ ಎಂಬುದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಸ್ತುತ ಉಭಯ ರಾಷ್ಟ್ರಗಳ ನಡುವೆ ಇರುವ ವಾತಾವರಣವೇ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಕರ್ತಾರ್ಪುರ ಕಾರಿಡಾರ್ ಯೋಜನೆ ಬಗ್ಗೆ ಮಾತನಾಡಿರುವ ಅವರು, ಕರ್ತಾರ್ಪುರ ಕಾರಿಡಾರ್ ಯೋಜನೆ ಉತ್ತಮ ರೀತಿಯಲ್ಲಿ ಮುಂದೆ ಸಾಗುತ್ತಿದೆ. ಗಡುವು ಮುಗಿಯುವುದರೊಳಗೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಕರ್ತಾರ್ಪುರ ಕಾರಿಡಾರ್'ಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರಗೊಂಡಿವೆ. ಯೋಜನೆ ಪ್ರಸ್ತುತ ಉತ್ತಮ ರೀತಿಯಲ್ಲಿ ಸಾಗುತ್ತಿದೆ. ನಿರೀಕ್ಷೆಯಂತೆಯೇ ಯೋಜನೆ ಸಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com