ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯ ಸ್ಥಿರ: ತಿಹಾರ್ ಜೈಲಿಗೆ ಶಿಫ್ಟ್

ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ದೆಹಲಿ: ದೆಹಲಿಯ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್ ಡಿಕೆ ಶಿವಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಏತನ್ಮಧ್ಯೆ ಡಿಕೆಶಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಡಿಕೆಶಿ ಆರೋಗ್ಯ ಯಥಾಸ್ಥಿತಿಗೆ ಬಂದಿರುವುದಾಗಿ ವೈದ್ಯರು ವರದಿ ನೀಡಿದ್ದರಿಂದ ಪೊಲೀಸರು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ. ತಿಹಾರ್ ಜೈಲಿನ ಸೆಲ್ ನಂ.7ರಲ್ಲಿ ಡಿಕೆಶಿಯನ್ನು ಇಡಲಾಗಿದೆ ಎಂದು ವರದಿ ತಿಳಿಸಿದೆ.

ಹೈ ಬಿಪಿ ಮತ್ತು ಹೈ ಶುಗರ್ ಹಿನ್ನೆಲೆಯಲ್ಲಿ ಶನಿವಾರದಿಂದ ಡಿಕೆ ಶಿವಕುಮಾರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವೈದ್ಯಾಧಿಕಾರಿಗಳು ಆರೋಗ್ಯ ಸ್ಥಿರ ಎಂಬ ವರದಿ ನೀಡಿದ ಬೆನ್ನಲ್ಲೇ ತಿಹಾರ ಜೈಲಿಗೆ ಡಿ.ಕೆ.ಶಿವಕುಮಾರ್ ಶಿಫ್ಟ್ ಮಾಡಲಾಗಿದೆ. ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಈಗಾಗಲೇ ಡಿಕೆಶಿವಕುಮಾರ್ ಅವರನ್ನ ಅಕ್ಟೋಬರ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿತ್ತು.

ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ  ಕೋರ್ಟಿನಲ್ಲಿ  ವಾದ-ಪ್ರತಿವಾದ ನಡೆಯಲಿದೆ.  ಬುಧವಾರ ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಆದರೆ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಧೀಶ ಅಜಯ್‍ಕುಮಾರ್ ಕುಹರ್ ವಿಚಾರಣೆಯನ್ನ ಇವತ್ತಿಗೆ ಮುಂದೂಡಿದ್ದಾರೆ. ಜಾಮೀನು ಕೋರಿ ಡಿಕೆಶಿ ಪರ ವಕೀಲರ ವಾದಕ್ಕೆ ಇಡಿ ವಕೀಲರು ಪ್ರತಿವಾದ ಮಂಡಿಸಬೇಕಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com