ಡಿ.ಕೆ.ಶಿವಕುಮಾರ್ ಕೇಸ್: ಇಡಿ ಅಧಿಕಾರಿಗಳ ಮುಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ  ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರನ್ನು ಆರ್ ಎಂಎಲ್ ಆಸ್ಪತ್ರೆಯಿಂದ ತಿಹಾರ್  ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದೇ ವೇಳೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ,. ಶಿವಕುಮಾರ್ ಸೇರಿದಂತೆ ಇತರರು ನೀಡಿದ ಹೇಳಿಕೆ ನೀಡಬೇಕಾಗುತ್ತದೆ. 

ಡಿಕೆ ಶಿವಕುಮಾರ್ ಅವರನ್ನು ಸೆಪ್ಚಂಬರ್ 3 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು, ಅಕ್ಟೋಬರ್ 1 ರವರೆಗೆ ಶಿವಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com