ದೆಹಲಿ: ಪತ್ನಿ ಜತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸ್ನೇಹಿತರೊಂದಿಗೆ ಸೆಕ್ಸ್ ಗೆ ಒತ್ತಾಯಿಸಿದ ಪತಿ ಮಹಾಶಯ!

ಪತ್ನಿ ಮೇಲೆ ಅತ್ಯಾಚಾರ ಎಸಗಿದ, ಆಕೆಯನ್ನು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಹಾಗೂ ಸ್ನೇಹಿತರೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ ಪತಿಯ ವಿರುದ್ಧ ದೆಹಲಿ...

Published: 20th September 2019 03:44 PM  |   Last Updated: 20th September 2019 03:44 PM   |  A+A-


Sex

ಸಾಂದರ್ಭಿಕ ಚಿತ್ರ

Posted By : Lingaraj Badiger
Source : ANI

ನವದೆಹಲಿ: ಪತ್ನಿ ಮೇಲೆ ಅತ್ಯಾಚಾರ ಎಸಗಿದ, ಆಕೆಯನ್ನು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಹಾಗೂ ಸ್ನೇಹಿತರೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ ಪತಿಯ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಆರೋಪಿ ಪತಿಯನ್ನು ಅತುಲ್ ಅಗರವಾಲ್ ಎಂದು ಗುರುತಿಸಲಾಗಿದ್ದು, ತನ್ನ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸುತ್ತಿದ್ದರು ಮತ್ತು ಲೈಂಗಿಕ ಕ್ರಿಯೆಯ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಕಳೆದ ಜನವರಿಯಲ್ಲಿ ಮದ್ಯ ಸೇವಿಸಿ ಸ್ನೇಹಿತರೊಂದಿಗೆ ಮನೆಗೆ ಬಂದ ಪತಿಯು ತನ್ನನ್ನು ಆತನ ಗೆಳೆಯರೊಂದಿಗೆ ಮಲಗುವಂತೆ ಹೇಳಿದ್ದ. ಅದಕ್ಕೆ ತಾನು ಆಕ್ಷೇಪ ವ್ಯಕ್ತಪಡಿಸಿದಾಗ ತಮ್ಮಿಬ್ಬರ ಸೆಕ್ಸ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದ. ಅಲ್ಲದೆ ಆತನ ಗೆಳೆಯನೊಂದಿಗೆ ತನ್ನನ್ನು ರೂಮಿನಲ್ಲಿ ಕೂಡಿಹಾಕಿದ್ದ ಎಂದು ಮಹಿಳೆ ದೂರಿದ್ದಾರೆ.

ಬಳಿಕ ನನ್ನ ಗಂಡನ ಸ್ನೇಹಿತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅವನು ಹೋದ ಬಳಿಕ ಮತ್ತೊಬ್ಬ ವ್ಯಕ್ತಿ ಬಂದು ನನ್ನನ್ನು ಸೆಕ್ಸ್‌ ಮಾಡುವಂತೆ ಒತ್ತಾಯಿಸಿದ್ದ. ರಾತ್ರಿ ಮತ್ತೆ ಮನೆಗೆ ಬಂದ ಪತಿಯು ತನ್ನೊಂದಿಗೆ ಸ್ವಾಭಾವಿಕವಲ್ಲದ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಎಂದು ಆರೋಪಿಸಿದ್ದಾರೆ.

ಘಟನೆ ಬಳಿಕ ಸಂತ್ರಸ್ತೆಯು ಎಲ್ಲ ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಿದ್ದು, ಸೆ. 17ರಂದು ಭಾರತೀಯ ದಂಡ ಸಂಹಿತೆಯ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp