ಕಣಿವೆಯಲ್ಲಿ ಮಕ್ಕಳ ಬಂಧನ:ಹೈಕೋರ್ಟ್‌ನಿಂದ ವರದಿ ಕೋರಿದ ಸುಪ್ರೀಂ ಕೋರ್ಟ್
ಕಣಿವೆಯಲ್ಲಿ ಮಕ್ಕಳ ಬಂಧನ:ಹೈಕೋರ್ಟ್‌ನಿಂದ ವರದಿ ಕೋರಿದ ಸುಪ್ರೀಂ ಕೋರ್ಟ್

ಕಣಿವೆಯಲ್ಲಿ ಮಕ್ಕಳ ಬಂಧನ:ಹೈಕೋರ್ಟ್‌ನಿಂದ ವರದಿ ಕೋರಿದ ಸುಪ್ರೀಂ ಕೋರ್ಟ್

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಣಿವೆಯಲ್ಲಿ ಮಕ್ಕಳನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್  ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಿಂದ ವರದಿ ಕೋರಿದೆ.

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಣಿವೆಯಲ್ಲಿ ಮಕ್ಕಳನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್  ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಿಂದ ವರದಿ ಕೋರಿದೆ. ಕಾಶ್ಮೀರದಲ್ಲಿ ಮಕ್ಕಳನ್ನು ಬಂಧಿಸಲಾಗಿದೆ ಎಂದು ಆರೋಪಿಸಿರುವ ಮಕ್ಕಳ ಹಕ್ಕು  ಕಾರ್ಯಕರ್ತರಾದ ಇನಾಕ್ಷಿ ಗಂಗೂಲಿ ಮತ್ತು ಶಾಂತಾ ಸಿನ್ಹಾ ಅವರ ವಕೀಲರು ಇದಕ್ಕಾಗಿ ಕಣಿವೆಯ ಜನರು ಅಲ್ಲಿನ ಹೈಕೋರ್ಟ್ ಅನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದರು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು ಕಾಶ್ಮೀರದಲ್ಲಿ ಮಕ್ಕಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂಬ ಮನವಿಯ ಬಗ್ಗೆ ವಿಚಾರಣೆಗೆ ಸಮ್ಮತಿ ನೀಡಿದ್ದು,  ಈ ವಿಷಯದ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಉನ್ನತ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಬಾಲಾಪರಾಧಿ ನ್ಯಾಯ ಸಮಿತಿಗೆ ನಿರ್ದೇಶನ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com