ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ

ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರಪ್ರದೇಶದ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

Published: 20th September 2019 10:37 AM  |   Last Updated: 20th September 2019 10:39 AM   |  A+A-


Swami Chinmayanand

ಸ್ವಾಮಿ ಚಿನ್ಮಯಾನಂದ

Posted By : Manjula VN
Source : ANI

ನವದೆಹಲಿ: ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರಪ್ರದೇಶದ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. 

ಸ್ವಾಮಿ ಚಿನ್ಮಯಾನಂದ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಉತ್ತರಪ್ರದೇಶ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ಬಿಜೆಪಿ ನಾಯಕನಾಗಿರುವ ಹಿನ್ನಲೆಯಲ್ಲಿ ಸ್ವಾಮಿ ಚಿನ್ಮಯಾನಂದ ಅವರ ಮೇಲೆ ಪೊಲೀಸರು ಮೃದು ಧೋರಣೆಯನ್ನು ತೋರುತ್ತಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಆರೋಪಗಳ ಬೆನ್ನಲ್ಲೇ ಇದೀಗ ಪೊಲೀಸರು ಸ್ವಾಮಿ ಚಿನ್ಮಯಾನಂದ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಕಾನೂನು ವಿದ್ಯಾರ್ಥಿನಿಯೊಬ್ಬಳು ಸ್ವಾಮಿ ಚಿನ್ಮಯಾನಂದ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದರು. ಚಿನ್ಮಯಾನಂದ ಅವರು ಒಂದು ವರ್ಷಗಳವರೆಗೆ ನನ್ನ ಮೇಲೆ ದೈಹಿಕ ದೌರ್ಜನ್ಯವೆಸಗಿದ್ದಾರೆ. ಅವರ ಕೃತ್ಯವನ್ನು ಸಾಬೀತು ಪಡಿಸಲು ನನ್ನ ಬಳಿ ಸಾಕ್ಷ್ಯಾಧಾರಗಳಿದ್ದು, ಸೂಕ್ತ ಸಮಯದಲ್ಲಿ ಅದನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡುತ್ತೇನೆ. 

ನನ್ನ ಮತ್ತು ಕುಟುಂಬದ ಸುರಕ್ಷತೆಯ ದೃಷ್ಟಿಯಿಂದ ನಾನು ವಿಡಿಯೋ ಬಿಡುಗಡೆ ಮಾಡಿದೆ. ಇಲ್ಲದಿದ್ದರೆ ಚಿನ್ಮಯಾನಂದ ನನ್ನನ್ನು ಹತ್ಯೆ ಮಾಡಿಸಿ ಬಿಡುತ್ತಿದ್ದರು. ಶಹಜಾನ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಾಣ ಕಾಪಾಡಿಕೊಳ್ಳಲು ನಾನು ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡುತ್ತಾ, ನಿಗೂಢ ಸ್ಥಳಗಳಲ್ಲಿ ಅವಿತು ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ, ಜಿಲ್ಲಾಡಳಿತ ಕೂಡ ನಮಗೆ ರಕ್ಷಣೆ ನೀಡುತ್ತಿಲ್ಲ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿ ದೆಹಲಿಯಲ್ಲಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp