ಗೋಡೆ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ

ಮಹಾರಾಷ್ಟ್ರದ ಬುಲ್ದಾನಾದಲ್ಲಿ ಇಂದು ಮುಂಜಾನೆ ಗೋಡೆ ಕುಸಿತದಿಂದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬುಲ್ದಾನಾ: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಇಂದು ಮುಂಜಾನೆ ಗೋಡೆ ಕುಸಿತದಿಂದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ 

ಮುಂಜಾನೆ 2 ಗಂಟೆ ಸುಮಾರಿನಲ್ಲಿ ಈ ದುರ್ಘಟನೆ ನಡೆದಿದ್ದು, ಇನ್ನು ಉಳಿದ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಹ್ಕರ್ ಕೊಳಚೆ  ಪ್ರದೇಶದಲ್ಲಿನ ಮನೆಯೊಂದರಲ್ಲಿ ಸಿಖ್ ಸಮುದಾಯದ ಐವರು ಸದಸ್ಯರು ನಿದ್ರೆಯಲ್ಲಿರುವಾಗ  ಮಳೆಯಿಂದಾಗಿ ಶಿಥಿಲಗೊಂಡ ಮನೆಯ ಗೋಡೆ ಕುಸಿದು ಬಿದಿದ್ದು, ಎಲ್ಲಾ ಐವರು ಅವಶೇಷಗಳಡಿ ಸಿಲುಕಿದ್ದರು ಎಂದು ಅವರು ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಇಬ್ಬರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರು ಮೃತಪಟ್ಟಿದ್ದು, ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಾಧಿಕಾರಿ ಡಾ. ನಿಲೇಶ್ ಗಟ್ಟಾನಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com