ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಶಿವಸೇನೆ ಜಂಟಿಯಾಗಿ ಸ್ಪರ್ಧಿಸಲಿವೆ: ಮಹಾ ಸಿಎಂ ಫಡ್ನವಿಸ್

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತುಶಿವಸೇನೆ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಹೇಳಿದ್ದಾರೆ.
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತುಶಿವಸೇನೆ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಹೇಳಿದ್ದಾರೆ.

ಈ ಬಾರಿಯೂ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ತಾವೇ ಮುಖ್ಯಮಂತ್ರಿಗಳಾಗುವುದಾಗಿ ಫಡ್ನವಿಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬಿಜೆಪಿ 162 ಕ್ಷೇತ್ರಗಳಲ್ಲಿ ಹಾಗೂ ಶಿವಸೇನೆ 126 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂಬ ಮಾಧ್ಯಮ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮಹಾ ಸಿಎಂ, ಸೀಟು ಹಂಚಿಕೆ ಕುರಿತು ಇನ್ನೂ ಮಾತುಕತೆ ನಡೆಯುತ್ತಿದೆ. ಅಂತಿಮವಾಗಿಲ್ಲ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮುಂದುವರೆಯಲಿದೆ. ಒಂದೇರಡು ದಿನದಲ್ಲಿ ಸೀಟು ಹಂಚಿಕೆ ಹಂತಿಮವಾಗಲಿದೆ ಎಂದು ಹೇಳಿದ್ದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಘೋಷಣೆಯಾಗಿದ್ದು, ಅಕ್ಟೋಬರ್ 21ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಮತ್ತು ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com