ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ; ಇಂದು ಚು.ಆಯೋಗದಿಂದ ದಿನಾಂಕ ಪ್ರಕಟ

ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಲಿದೆ.

Published: 21st September 2019 09:56 AM  |   Last Updated: 21st September 2019 09:56 AM   |  A+A-


Election Commission

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಲಿದೆ.

ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕಗಳ ಕುರಿತು ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಪ್ರಕಟಿಸುವ ಸಾಧ್ಯತೆ ಇದೆ. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದು ಹಂತದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಒಂದರಿಂದ ಎರಡು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ. ಅಂತೆಯೇ ಮಹಾರಾಷ್ಟ್ರ ಮತ್ತು ಹರಿಯಾಣಕ್ಕೆ ಸಂಬಂಧಿಸಿದ ಚುನಾವಣಾ ಪ್ರಕಟಣೆಗೆ ಸಂಬಂಧಿಸಿದ ಕಿರುಪುಸ್ತಕವನ್ನು ಸಿದ್ಧಪಡಿಸುವಂತೆ ಚುನಾವಣಾ ಆಯೋಗ ತನ್ನ ಚುನಾವಣಾ ನಿರ್ವಹಣೆ ಮತ್ತು ಯೋಜನಾ ತಂಡವನ್ನು ಕೇಳಿದೆ ಎಂದು ತಿಳಿದುಬಂದಿದೆ.

ಸದ್ಯ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಮಹಾರಾಷ್ಟ್ರಡ 288 ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp