ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಆರು ಮಂದಿ ಸಾವು

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಲಖನೌ: ಉತ್ತರ ಪ್ರದೇಶದ ಇಟಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮಿರಾಚಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಢದಲ್ಲಿ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಪಟಾಕಿ ಕಾರ್ಖಾನೆಯ ಕಟ್ಟಡ ಸಂಪೂರ್ಣ ಧ್ವಂಸಗೊಂಡಿದೆ. ಹೀಗಾಗಿ ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಇಟಾ ಎಎಸ್ ಪಿ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಘಟನೆಗೆ ಕಾರಣ ಇನ್ನು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಗುಡ್ಡ ಪ್ರದೇಶದ ಮನೆಯೊಂದರಲ್ಲಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು. ಇದು ಮುನ್ನಿ ದೇವಿ ಎಂಬುವವರ ಹೆಸರಿನಲ್ಲಿದ್ದು, ಸ್ಫೋಟ ಸಂಭವಿಸಿದ ವೇಳೆ 15-20 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com