ವಿಶ್ವ ಕರ್ಮ ಸಮುದಾಯಕ್ಕೆ ಬಿಜೆಪಿ ವಂಚನೆ- ಅಖಿಲೇಶ್ ಯಾದವ್ ಆರೋಪ

ವಿಶ್ವಕರ್ಮ ಸಮುದಾಯವನ್ನು ಬಿಜೆಪಿ ವಂಚಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಖನೌ: ವಿಶ್ವಕರ್ಮ ಸಮುದಾಯವನ್ನು ಬಿಜೆಪಿ ವಂಚಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೋಮತಿ ನದಿ ದಂಡೆ ಮೇಲೆ ವಿಶ್ವಕರ್ಮ ದೇವಾಲಯವನ್ನು ಸ್ಥಾಪನೆ ಮಾಡುವುದಾಗಿ ಹೇಳುವ ಮೂಲಕ ಆ ಸಮುದಾಯವನ್ನು ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ.

ಒಂದು ವೇಳೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ವಿಶ್ವಕರ್ಮ ಜಯಂತಿ ದಿನದಂದು ಸಾರ್ವತ್ರಿಕ ರಜೆಯನ್ನು ಪುನರ್ ಆರಂಭಿಸಲಾಗುವುದು ಎಂದು ತಿಳಿಸಿದರು.

ವಿಶ್ವಕರ್ಮ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು,  ಈ ಸಮುದಾಯಕ್ಕೆ ಆರ್ಹತೆ ಇದ್ದರೂ ಗೌರವ ನೀಡದೆ ಬಿಜೆಪಿ ಅಪಮಾನಿಸುತ್ತಿದೆ. ವಿಶ್ವಕರ್ಮ ಸಮುದಾಯ ಎಸ್ ಪಿಗೆ ಬೆಂಬಲ ನೀಡಿದರೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಮಾಡುವುದಾಗಿ ಹೇಳಿದರು.

ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲ್ಯಾಪ್ ಟಾಪ್ ಗಳನ್ನು ವಿತರಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com