ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ, ನೆರೆ ಪ್ರವಾಹಕ್ಕೆ ಹಣ ಬಿಡುಗಡೆಗೆ ಮನವಿ 

ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಪುನರ್ವಸತಿ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಮನವಿ ಮಾಡಿದ್ದಾರೆ.
 

Published: 22nd September 2019 12:52 PM  |   Last Updated: 22nd September 2019 12:52 PM   |  A+A-


B S Yedyurappa

ಬಿ ಎಸ್ ಯಡಿಯೂರಪ್ಪ

Posted By : sumana
Source : Online Desk

ನವದೆಹಲಿ: ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಪುನರ್ವಸತಿ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಮನವಿ ಮಾಡಿದ್ದಾರೆ.


ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.


ಪ್ರವಾಹ ಪೀಡಿತರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇದುವರೆಗೆ ಮೊದಲ ಕಂತಿನ ಹಣ ಬಿಡುಗಡೆ ಆಗಿಲ್ಲ, ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಕೂಡ ಹಣಕಾಸಿನ ತೊಂದರೆಯಿದೆ. ಹೀಗಾಗಿ ಶೀಘ್ರವೇ 2 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮನವಿ ಮಾಡಿದೆವು. ಪ್ರಧಾನಿ ಮೋದಿಯವರು ಅಮೆರಿಕಾ ಪ್ರವಾಸದಿಂದ ಬಂದ ಬಳಿಕ ಇನ್ನೆರಡು ಮೂರು ದಿನಗಳಲ್ಲಿ  ಚರ್ಚೆ ನಡೆಸಿ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದರು. 


ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಸ್ಥಿತಿಗತಿಗಳನ್ನು ಅಮಿತ್ ಶಾ ಅವರೇ ಖುದ್ದು ಬಂದು ಪರಿಶೀಲಿಸಿ ನೋಡಿದ್ದಾರೆ. ಪ್ರವಾಹ ಸ್ಥಳಗಳಿಗೆ ಹಣ ಬಿಡುಗಡೆ ಮಾಡಲು ಉಪ ಚುನಾವಣೆಯ ನೀತಿ ಸಂಹಿತಿ ಅಡಿಯಾಗಲ್ಲ ಪ್ರಧಾನಿ ಬಂದ ಬಳಿಕ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.


ಪರಿಹಾರ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ ಎಂದಾಗ, ಮುಂಬರುವ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ ಸೇರಿದಂತೆ ಪ್ರವಾಹಪೀಡಿತ ಯಾವ ರಾಜ್ಯಕ್ಕೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ, ಅಲ್ಲಿನ ತಂಡ ಬಂದು ಪರಿಶೀಲಿಸಿ ವರದಿ ಸಲ್ಲಿಸಿ ಇನ್ನೆರಡು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಯಡಿಯೂರಪ್ಪ ಹೇಳಿದರು.


ಅನರ್ಹ ಶಾಸಕರ ಬಗ್ಗೆ ಚರ್ಚೆ ಮಾಡಿಲ್ಲ: ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ನಿಬಾಯಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಾಗಿ ಒಂದು ತಿಂಗಳು ಕಳೆದರೂ ಪರಿಹಾರ ನೀಡಿಲ್ಲ.‌ಆದಷ್ಟು ಶೀಘ್ರ ಹಣಕಾಸಿನ ನೆರವು ಬಿಡುಗಡೆ ಮಾಡಲು ಕೋರಲಾಗಿದೆ. ಎರಡು ದಿನಗಳಲ್ಲಿ ಕೇಂದ್ರದ ನೆರವು ಸಿಗಲಿದೆ. ನೆರೆ ಪರಿಹಾರ ಬಿಡುಗಡೆ ಗೆ ನೀತಿ ಸಂಹಿತೆ ಅಡ್ಡಿಯಾಗಲ್ಲ. ಅನರ್ಹ ಶಾಸಕರ ಬಗ್ಗೆ ಅಮಿತ್ ಷಾ ಜತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.


ರಾಜ್ಯದ ಪ್ರವಾಹ ಪರಿಸ್ಥಿತಿಗೆ ಕೇಂದ್ರದಿಂದ ಅನುದಾನ ಪಡೆಯುವ ಅಗತ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಅವರು ಆ ರೀತಿ ಹೇಳಿಕೆ ನೀಡಬಾರದು, ನಾನು ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ ಎಂದರು.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp