ಬಿಜೆಪಿ ಬೆದರಿಕೆಗೆ ಹೆದರಲ್ಲ, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಗೆ ತರಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ನಂಬಿಕೆ ಇರಲಿ, ಬಿಜೆಪಿ ಬೆದರಿಕೆಗೆ ಹೆದರಲ್ಲ, ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನಂಬಿಕೆ ಇರಲಿ, ಬಿಜೆಪಿ ಬೆದರಿಕೆಗೆ ಹೆದರಲ್ಲ, ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಾರ್ಮಿಕ ಸಂಘಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಎನ್‌ಆರ್‌ಸಿ ಬಗ್ಗೆ ಬಿಜೆಪಿ ಭೀತಿ ಸೃಷ್ಟಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಆರು ಮಂದಿ ಸಾವಿಗೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎನ್‌ಆರ್‌ಸಿಗೆ ಅವಕಾಶ ನೀಡುವುದಿಲ್ಲ ಎಂದರು.

ಅಸ್ಸಾಂ ಒಪ್ಪಂದದಿಂದಾಗಿ ಸದ್ಯಕ್ಕೆ ಅಸ್ಸಾಂನಲ್ಲಿ ಮಾತ್ರ ಜಾರಿಗೆ ತರಲಾಗಿದೆ. ಅದನ್ನು ಪಶ್ಚಿಮ ಬಂಗಾಳದಲ್ಲಿ ಅಥವಾ ಬೇರೆ ರಾಜ್ಯದಲ್ಲಿ ನಡೆಸಲಾಗುವುದಿಲ್ಲ ಎಂದರು.

1985ರಲ್ಲಿ ಅಂದಿನ ರಾಜೀವ್ ಗಾಂಧಿ ಸರ್ಕಾರ ಮತ್ತು ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ನಡುವೆ ಸಹಿ ಹಾಕಿತ್ತು. ಬಾಂಗ್ಲಾದೇಶದಿಂದ ಅಕ್ರಮವಾಗಿ ನೆಲೆಸಿದೆ ಎಂದು ಆರೋಪಿಸಲಾದ ವಲಸಿಗರ ವಿರುದ್ಧ ಆರು ವರ್ಷಗಳ ಬೃಹತ್ ಆಂದೋಲನ ನಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com