ಸುಪ್ರೀಂ ಕೋರ್ಟ್'ಗೆ 4 ನೂತನ ನ್ಯಾಯಾಧೀಶರ ಸೇರ್ಪಡೆ

ನಾಲ್ಕು ಹೊಸ ನ್ಯಾಯಾಧೀಶರು ಸುಪ್ರೀಂಕೋರ್ಟ್'ನ ನ್ಯಾಯಾಧೀಶರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ನಾಲ್ಕು ಹೊಸ ನ್ಯಾಯಾಧೀಶರು ಸುಪ್ರೀಂಕೋರ್ಟ್'ನ ನ್ಯಾಯಾಧೀಶರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ನಾಲ್ವರು ನೂತನ ನ್ಯಾಯಾಧೀಶರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸುಪ್ರೀಂಕೋರ್ಟ್'ನ ಎಲ್ಲಾ ನ್ಯಾಯಾಧೀಶರು ಮತ್ತು ಹಲವಾರು ವಕೀಲರು ಉಪಸ್ಥಿತರಿದ್ದರು. 

ಹಿಮಾಚಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ವಿ.ರಾಮಸುಬ್ರಮಣಿಯನ್, ರಾಜಸ್ಥಾನ ಹೈಕೋರ್ಟ್ ಮುಖಘ್ಯ ನ್ಯಾಯಮೂರ್ತಿ ರವೀಂದ್ರಭಟ್, ಪಂಜಾಬ್ ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಕೃಷ್ಣ ಮುರಾರಿ ಹಾಗೂ ಕೈರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿಷಿಕೇಶ್ ರಾಯ್ ಸುಪ್ರೀಂಕೋರ್ಟ್ ನೂತನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆಯನ್ನು 30ರಿಂದ 34ಕ್ಕೆ ಹೆಚ್ಚಿಸಿತ್ತು. ಸುಪ್ರೀಂಕೋರ್ಟ್'ಗೆ ನಾಲ್ವರು ನೂತನ ನ್ಯಾಯಾಧೀಶರ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಪ್ಪಿಗೆ ನೀಡಿದ್ದರು. 

ಈ ವರೆಗೂ ಸುಪ್ರೀಂಕೋರ್ಟ್'ನಲ್ಲಿ 30 ನ್ಯಾಯಾಧೀಶರು ಇದ್ದರು. ಆದರೆ, ಹೊಸ ನ್ಯಾಯಾಧೀಶರ ಪ್ರಮಾಣವಚನ ಸ್ವೀಕರಿಸಿದ ನಂತರ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com