ಅನರ್ಹ ಶಾಸಕರಿಗೆ ಮತ್ತಷ್ಟು ಟೆನ್ಶನ್: ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ 'ಸುಪ್ರೀಂ'!

ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್  ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

Published: 23rd September 2019 01:47 PM  |   Last Updated: 23rd September 2019 01:47 PM   |  A+A-


Supreme Court

ಸುಪ್ರೀಂಕೋರ್ಟ್

Posted By : Shilpa D
Source : ANI

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್  ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ದಿನಾಂಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ  ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಹತ್ವ ಪಡೆದಿತ್ತು,ಮಾಜಿ ಸ್ಪೀಕರ್ ರಮೇಶ್ ಕುಮಾರ್ 17 ಶಾಸಕರ ಸದಸ್ಯತ್ವವನ್ನು ಅನರ್ಹ ಗೊಳಿಸಿದ್ದರು.

ಈ ಅನರ್ಹತೆ ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.  ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಮಣ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ.

ಇನ್ನು ವಿಚಾರಣೆ ವೇಳೆ ಮಧ್ಯ ಪ್ರವೇಶಿಸಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಕೇಶ್ ದ್ವಿವೇದಿ, ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದರು. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp