ಅಕ್ರಮ ಹಣ ವರ್ಗಾವಣೆ - ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅಜಿತ್ ಪವಾರ್ ವಿರುದ್ಧ ಇಡಿ ಪ್ರಕರಣ ದಾಖಲು

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ ನಡೆದ 25000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆಯ ಕ್ರಿಮಿನಲ್ ಪ್ರಕರಣದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಸೋದರಳಿಯ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.
ಶರದ್ ಪವಾರ್
ಶರದ್ ಪವಾರ್

ನವದೆಹಲಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ ನಡೆದ 25000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆಯ ಕ್ರಿಮಿನಲ್ ಪ್ರಕರಣದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಸೋದರಳಿಯ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

ಪೊಲೀಸ್ ಎಫ್‌ಐಆರ್‌ಗೆ ಸಮನಾದ ಜಾರಿ ಪ್ರಕರಣ ಮಾಹಿತಿ ವರದಿಯನ್ನು ಎಲ್ಲಾ ಆರೋಪಿಗಳ ವಿರುದ್ಧ ಕೇಂದ್ರೀಯ ಸಂಸ್ಥೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಬೈ ಪೊಲೀಸ್ ಎಫ್‌ಐಆರ್ ಆಧರಿಸಿ ಈ ಪ್ರಕರಣವು ಆಗಿನ ಬ್ಯಾಂಕಿನ ನಿರ್ದೇಶಕರು, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಸಹಕಾರಿ ಬ್ಯಾಂಕಿನ 70 ಮಾಜಿ ಕಾರ್ಯಕರ್ತರ ಹೆಸರನ್ನು ಒಳಗೊಂಡಿದೆ.

ಪೊಲೀಸ್ ಎಫ್‌ಐಆರ್ ಆಧಾರದ ಮೇಲೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಅವರನ್ನು ಇಡಿ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಅವರು ಹೇಳಿದರು. ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಕರಣದ ನೋಂದಣಿ ಆಗಿರುವುದು ಗಮನಾರ್ಹ.

ತಮ್ಮ ಹೇಳಿಕೆಗಳನ್ನು ದಾಖಲಿಸಲು ಆರೋಪಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಿಕೊಳ್ಳುವುದು ಎಂದು ತಿಳಿದುಬಂದಿದೆ. ಇಡಿ ಪ್ರಕರಣದ ಆರೋಪಿಗಳಾದ ದಿಲೀಪ್ ರಾವ್ ದೇಶಮುಖ್, ಇಷರ್ ಲಾಲ್ ಜೈನ್, ಜಯಂತ್ ಪಾಟೀಲ್, ಶಿವಾಜಿ ರಾವ್, ಆನಂದ್ ರಾವ್ ಆಡ್ಸುಲ್, ರಾಜೇಂದ್ರ ಶಿಂಗಾನೆ ಮತ್ತು ಮದನ್ ಪಾಟೀಲ್ ಈ ಪಟ್ಟಿಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com