ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಮಾರ್ಗಸೂಚಿ ನೀಡಿ: ಕೇಂದ್ರಕ್ಕೆ 'ಸುಪ್ರೀಂ' ಸೂಚನೆ

ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸಾಮಾಜಿಕ ಜಾಲತಾಣಗಳ ಬಳಕೆ ಕುರಿತಂತೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ಗಂಭೀರವಾಗಿ ಚಿಂತಿಸಿ ಎಂದು ಸಲಹೆ

ನವದೆಹಲಿ: ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸಾಮಾಜಿಕ ಜಾಲತಾಣಗಳ ಬಳಕೆ ಕುರಿತಂತೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಅನಿರುದ್ಧಾ ಬೋಸ್ ನೇತೃತ್ವದ ದ್ವಿಸದಸ್ಯ ವಿಶೇಷ ಪೀಠ, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿತು. ಅಲ್ಲದೆ ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೆ ನಿಗಾ ಇರಿಸುವಂತೆ ಸೂಚಿಸಿದ ನ್ಯಾಯಪೀಠ, ತಂತ್ರಜ್ಞಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ಮೂಲ ಸಂದೇಶದಾರ ಅಥವಾ ಮೂಲ ದತ್ತಾಂಶಗಳನ್ನು ಹುಡುಕುವಂತಹ ಕಾರ್ಯದತ್ತ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.

ಅಲ್ಲದೆ ಈ ಬಗ್ಗೆ ಸುಪ್ರೀಂಕೋರ್ಟ್ ಆಗಲಿ ಅಥವಾ ಹೈಕೋರ್ಟ್ ಆಗಲಿ ಯಾವುದೇ ನಿರ್ಣಯ ಅಥವಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದಿಂದಲೇ ಈ ಕುರಿತು ಕ್ರಮ ಸಾಧ್ಯ. ಈ ಕುರಿತಂತೆ ಸೂಕ್ತ ಮಾರ್ಗ ಸೂಚಿ ಸಿದ್ಧಪಡಿಸಿ ಎಂದು ಸುಪ್ರೀಂ ನ್ಯಾಯಪೀಠ ಸೂಚಿಸಿದೆ.

'ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿ ಮತ್ತು ದತ್ತಾಂಶಗಳ ಕುರಿತು ಕೇಂದ್ರ ಸರ್ಕಾರ ಸೂಕ್ತ ಮತ್ತು ಸಮರ್ಪಕ ನೀತಿ ರೂಪಿಸಬೇಕು. ಸಾಮಾಜಿಕ ಜಾಲತಾಣಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ. ನಮ್ಮ ಬಳಿ ಅಂತಹ ತಂತ್ರಜ್ಞಾನ ವಿಲ್ಲವೆಂದು ಕೈ ಚೆಲ್ಲಿ ಕೂರಲೂ ಸಾಧ್ಯವಿಲ್ಲ. ತಂತ್ರಜ್ಞಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ಮೂಲ ಸಂದೇಶದಾರ ಅಥವಾ ಮೂಲ ದತ್ತಾಂಶಗಳನ್ನು ಹುಡುಕುವಂತಹ ಕಾರ್ಯದತ್ತ ಸರ್ಕಾರ ಕ್ರಮ ಕೈಗೊಳ್ಳಬೇಕು. ಮೂಲಕ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮೇಲೆ ಕಡಿವಾಣ ಹಾಕಬೇಕು ಎಂದು ನ್ಯಾಯಪೀಠ ಹೇಳಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, 'ಸುಳ್ಳು ಸುದ್ದಿಗಳು, ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಟ್ವಿಟರ್‌ ಇತ್ಯಾದಿ ಜಾಲತಾಣಗಳಲ್ಲಿಆಕ್ಷೇಪಾರ್ಹ ಸಂದೇಶಗಳು ಪ್ರಸಾರವಾದಾಗ, ಅವುಗಳ ಮೂಲವನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. 

ಫೇಸ್‌ಬುಕ್‌ ಮತ್ತು ವಾಟ್ಸ್‌ ಆ್ಯಪ್‌ ಜಾಲತಾಣಗಳು ತಮ್ಮ ವ್ಯವಹಾರಗಳ ನಿಯಂತ್ರಣಕ್ಕೆ ಸಂಬಂಧಿಸಿ ನಾನಾ ಹೈಕೋರ್ಟ್‌ಗಳಲ್ಲಿಬಾಕಿ ಇರುವ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸಲು ಮನವಿ ಸಲ್ಲಿಸಿವೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರಿಂ ಕೋರ್ಟ್‌ ನಡೆಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com