ಏಮ್ಸ್ ಆಸ್ಪತ್ರೆಯಿಂದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಡಿಸ್ಚಾರ್ಜ್, ದೆಹಲಿಯಲ್ಲೇ ವಾಸ

ಉತ್ತರ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೊ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕುಟುಂಬದ ಜೊತೆ...
ಏಮ್ಸ್
ಏಮ್ಸ್

ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೊ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕುಟುಂಬದ ಜೊತೆ ದೆಹಲಿಯಲ್ಲಿ ವಾಸಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಜುಲೈ 28ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖಳಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಯುವತಿ ಹಾಗೂ ಕುಟುಂಬಕ್ಕೆ ಪ್ರಾಣ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಲಾಗಿದೆ.

ತಮ್ಮ ರಾಜ್ಯದಲ್ಲಿ ಪ್ರಾಣ ಬೆದರಿಕೆ ಇರುವ ಹಿನ್ನಲೆಯಲ್ಲಿ ಯುವತಿ ಕುಟುಂಬದ ಜತೆ ದೆಹಲಿಯಲ್ಲೇ ವಾಸಿಸಲಿದ್ದಾರೆ. 

2017ರಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ.

ಈ ಸಂಬಂಧ ಸೆಂಗಾರ್ ಹಾಗೂ ಆತನಿಗೆ ಸಹಕರಿಸಿದ ಶಶಿ ಸಿಂಗ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಇತ್ತೀಚಿಗೆ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಸಂತ್ರಸ್ತೆ ಹಾಗೂ ಆಕೆಯ ವಕೀಲ ಗಂಭೀರವಾಗಿ ಗಾಯಗೊಂಡಿದ್ದರು. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com