ಪುಣೆಯಲ್ಲಿ ಭಾರಿ ಮಳೆ: ಕನಿಷ್ಠ 17 ಸಾವು, ಶಾಲಾ ಕಾಲೇಜ್ ಗಳಿಗೆ ರಜೆ

ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರವಾಹದಲ್ಲಿ ಕೊಚ್ಚಿಹೋದ ವಾಹನಗಳು
ಪ್ರವಾಹದಲ್ಲಿ ಕೊಚ್ಚಿಹೋದ ವಾಹನಗಳು

ಪುಣೆ: ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರಿ ಮಳೆಯಿಂದಾಗಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಬಿದ್ದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಮುಂಬೈ ಖಾರ್ ಪ್ರದೇಶದಲ್ಲಿ ಮಂಗಳವಾರ ಕಟ್ಟಡದಡಿ ಸಿಲುಕಿದ್ದ 10 ವರ್ಷದ ಬಾಲಕಿ ಇಂದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಪುಣೆ ಹಾಗೂ ಇತರೆ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾಯದಲ್ಲಿದ್ದ ಸುಮಾರು 16 ಸಾವಿರ ಜನರನ್ನು ರಕ್ಷಿಸಲಾಗಿದೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆ ಮತ್ತು ಹತ್ತಿರದ ತಾಲೂಕುಗಳಾದ ಪುರಂದರ್, ಭೋರ್, ಬಾರಾಮತಿ ಮತ್ತು ಹವೇಲಿಯಲ್ಲಿರುವ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ ಎಂದು ಪುಣೆ ಜಿಲ್ಲಾಧಿಕಾರಿ ಹೇಳಿದ್ದಾರೆ.

ಪುಣೆ ಗ್ರಾಮವೊಂದರಲ್ಲಿ ಕೇವಲ ಮೂರು ಗಂಟೆ ಅವಧಿಯಲ್ಲಿ 112 ಮಿ ಮೀ ಮಳೆಯಾಗಿ ದಾಖಲೆ ಸೃಷ್ಟಿಯಾಗಿದೆ. ಇದರ ಜೊತೆಗೆ ಮುಂಬೈ – ಪುಣೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com