ರಾಬರ್ಟ್ ವಾದ್ರಾ ಕಸ್ಡಡಿಗೆ ಪಡೆಯಲು ಮುಂದಾದ ಇಡಿ, ನಿರೀಕ್ಷಣಾ ಜಾಮೀನಿಗೆ ಆಕ್ಷೇಪ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಅಕ್ರಮ ಹಣ ವರ್ಗಾವಣೆ ದಂಧೆಯಲ್ಲಿ ನೇರವಾಗಿ ಭಾಗಿಯಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯ ಇದೆ....
ರಾಬರ್ಟ್ ವಾದ್ರ
ರಾಬರ್ಟ್ ವಾದ್ರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಅಕ್ರಮ ಹಣ ವರ್ಗಾವಣೆ ದಂಧೆಯಲ್ಲಿ ನೇರವಾಗಿ ಭಾಗಿಯಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಜಾರಿ ನಿರ್ದೇಶನಾಲಯದ ಗುರುವಾರ ದೆಹಲಿ ಹೈಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಿದೆ.

ರಾಬರ್ಟ್ ವಾದ್ರಾ ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ಆರೋಪಿ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಹೇಳಿದೆ.

ಲಂಡನ್ ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ನಿವೇಶನ ಖರೀದಿ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ರಾಬರ್ಟ್ ವಾದ್ರಾ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕು ಎಂದು ಜಾರಿ ನಿರ್ದೇಶನಾಲಯ ಪರ ವಕೀಲರು ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದು, ವಾದ್ರಾಗೆ ಕಸ್ಟಡಿಯಲ್ಲಿಟ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಕಸ್ಟಡಿಗೆ ಪಡೆಯಬೇಕಾಗಿದೆ ಎಂದು ಜಾರಿ ನಿರ್ದೇಶನಾಲಯ ವಾದ ಮಂಡಿಸಿದೆ. ಆದರೆ ಇ.ಡಿ ಆರೋಪವನ್ನು ವಾದ್ರಾ ಪರ ವಕೀಲರು ತಳ್ಳಿಹಾಕಿದ್ದು, ತನ್ನ ಕಕ್ಷಿದಾರ ತನಿಖೆಗೆ ಸಹಕರಿಸಿದ್ದಾರೆ. ಆ ನಿಟ್ಟಿನಲ್ಲಿ ಇಡಿ ಸಮನ್ಸ್ ನೀಡಿದ ಮೇಲೆ ತನಿಖೆಗೆ ಹಾಜರಾಗಿರುವುದಾಗಿ ವಾದಿಸಿದರು.

ಜಾರಿ ನಿರ್ದೇಶನಾಲಯದ ತನಿಖೆ ವೇಳೆ ಎಲ್ಲಾ ಪ್ರಶ್ನೆಗಳಿಗೂ ವಾದ್ರಾ ಉತ್ತರ ನೀಡಿದ್ದಾರೆ. ಆದರೆ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ವಾದ್ರಾ ಪರ ವಕೀಲರು ವಾದ ಮಂಡಿಸಿದ್ದು, ವಾದ-ಪ್ರತಿವಾದ ಆಲಿಸಿದ ಹೈಕೋರ್ಟ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com