ವಿಶ್ವಸಂಸ್ಥೆಯಲ್ಲಿ ಮೋದಿ ಭಾಷಣ: ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.

ಇಂದು ಬೆಳಗ್ಗೆ ರಾಜೋರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕ್ ಸೇನೆ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಉಗ್ರರನ್ನು ಭಾರತದೊಳಗೆ ನುಗ್ಗಿಸುವ ಉದ್ದೇಶದಿಂದ ಪಾಕ್ ಸೇನೆ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಳಿಸಿದ ಬಳಿಕ ಕೇಂದ್ರ ಕಾಶ್ಮೀರದಲ್ಲಿ ಭಾರಿ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com