ಪ್ರಧಾನಿ ಮೋದಿ ಭಾರತವನ್ನು ವಿಶ್ವ ವೇದಿಕೆಯಲ್ಲಿ ನಿಲ್ಲಿಸಿದ್ದಾರೆ: ಅಮಿತ್ ಶಾ

ವಿಶ್ವಸಂಸ್ಥೆಯಲ್ಲಿ ಐತಿಹಾಸಿಕ ಭಾಷಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಕೊಂಡಾಡಿದ್ದಾರೆ. 
ಗೃಹ ಸಚಿವ ಅಮಿತ್ ಶಾ
ಗೃಹ ಸಚಿವ ಅಮಿತ್ ಶಾ

ನವದೆಹಲಿ: ವಿಶ್ವಸಂಸ್ಥೆಯಲ್ಲಿ ಐತಿಹಾಸಿಕ ಭಾಷಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಕೊಂಡಾಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಐತಿಹಾಸಿಕ ಭಾಷಣ'ಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತವನ್ನು ವಿಶ್ವ ವೇದಿಕೆಯಲ್ಲಿ ಪ್ರಮುಖ ಕಾರಣ ಮತ್ತು ಉದ್ದೇಶದ ಧ್ವನಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಐತಿಹಾಸಿಕ ಭಾಷಣಕ್ಕಾಗಿ ನಾನು ಪ್ರಧಾನ ಮಂತ್ರಿಯನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಸಾಂಸ್ಕೃತಿಕ ನೀತಿಗಳು, 130 ಕೋಟಿ ಭಾರತೀಯರ ಆಕಾಂಕ್ಷೆಗಳು ಮತ್ತು ನಮ್ಮ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸುವ ಸಂಕಲ್ಪವನ್ನು ಸಂಪೂರ್ಣವಾಗಿ ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಭಾರತವನ್ನು ವಿಶ್ವ ವೇದಿಕೆಯಲ್ಲಿ ಕಾರಣ ಮತ್ತು ಉದ್ದೇಶದ ಪ್ರಮುಖ ಧ್ವನಿಯನ್ನಾಗಿ ಮಾಡಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com