ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ: ಕೋರ್ಟ್ ಗೆ ಚಿದಂಬರಂ ಹೇಳಿಕೆ

ತಾವು ಎಂದಿಗೂ ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ ಅವರನ್ನು ಭೇಟಿಯಾಗಿಯೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

Published: 28th September 2019 08:27 AM  |   Last Updated: 28th September 2019 08:27 AM   |  A+A-


P Chidambaram

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ನವದೆಹಲಿ: ತಾವು ಎಂದಿಗೂ ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ ಅವರನ್ನು ಭೇಟಿಯಾಗಿಯೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಮ್ಮ ಪರ ವಕೀಲ ಕಪಿಲ್ ಸಿಬಲ್ ಅವರ ಮೂಲಕ ಕೋರ್ಟ್ ಗೆ ಹೇಳಿಕೆ ದಾಖಲಿಸಿರುವ ಚಿದಂಬರಂ, ತಾವು ಎಂದಿಗೂ ಇದ್ರಾಣಿ ಮುಖರ್ಜಿ ಅವರನ್ನು ಭೇಟಿಯೇ ಆಗಿಲ್ಲ. ಅವರ ಆರೋಪಗಳು ಶೇ.100ರಷ್ಟು ಸುಳ್ಳು ಎಂದು ಹೇಳಿದ್ದಾರೆ.

ಇಂದ್ರಾಣಿ ಮುಖರ್ಜಿರನ್ನು ಎಂದಿಗೂ ಯಾವುದೇ ಸ್ಥಳದಲ್ಲಿ ಭೇಟಿಯಾಗಲಿಲ್ಲ ಎಂದು ಐಎನ್ಎಕ್ಸ್ ಮಾಧ್ಯಮ ಪ್ರಕರಣದ ಆರೋಪಿ ಪಿ ಚಿದಂಬರಂ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ  ಬುಧವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಐಎನ್ಎಕ್ಸ್ ಮೀಡಿಯಾದ ಸಹ-ಸಂಸ್ಥಾಪಕರಾಗಿರುವ ಇಂದ್ರಾಣಿ ಮುಖರ್ಜಿ ಅವರು 2006 ರಲ್ಲಿ ಚಿದಂಬರಂನ ನಾರ್ತ್ ಬ್ಲಾಕ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಿ ಚಿದಂಬರಂ ಮುಖರ್ಜಿಗೆ ತನ್ನ ಮಗನನ್ನು ಗಣನೆಗೆ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. 

ಸಿಬಿಐ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿತ್ತು. ಎರಡು ವಾರಗಳ ವಿಚಾರಣೆಯ ನಂತರ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಲಾಯಿತು.  ಚಿದಂಬರಂ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಧೀಶರು ತಿರಸ್ಕರಿಸಿದ ಹಿನ್ನಲೆಯಲ್ಲಿ ಅವರು ದೆಹಲಿ ಹೈಕೋರ್ಟ್ ಗೆ ಮೊರೆಹೋದರು. 

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp