ಉತ್ತರ ಪ್ರದೇಶ ಆಡಳಿತದಿಂದ ಚಿನ್ಮಾಯನಂದ ರಕ್ಷಣೆ: ಪ್ರಿಯಾಂಕಾ ಗಾಂಧಿ ವಾದ್ರಾ

ಚಿನ್ಮಾಯನಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸದೆ ಉತ್ತರ ಪ್ರದೇಶ ಆಡಳಿತದಿಂದ ರಕ್ಷಣೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಚಿನ್ಮಾಯನಂದ, ಪ್ರಿಯಾಂಕಾ
ಚಿನ್ಮಾಯನಂದ, ಪ್ರಿಯಾಂಕಾ

ನವದೆಹಲಿ: ಚಿನ್ಮಾಯನಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸದೆ ಉತ್ತರ ಪ್ರದೇಶ ಆಡಳಿತದಿಂದ ರಕ್ಷಣೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಹಜನ್ ಪುರದ ಕಾನೂನು ವಿದ್ಯಾರ್ಥಿನಿ  ಚಿನ್ಮಾಯನಂದ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ.  ಒಂದು ವರ್ಷದ ಹಿಂದಷ್ಟೇ ಉತ್ತರ ಪ್ರದೇಶದ ಅಧಿಕಾರಿಗಳು ಚಿನ್ಮಾಯನಂದರಿಗೆ ಅರತಿ ಎತ್ತಿ ಪೂಜೆ ಸಲ್ಲಿಸುತ್ತಿರುವ ಮಾಧ್ಯಮಗಳ ವರದಿಯನ್ನು ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇವಲ ಒಂದು ವರ್ಷದ ಹಿಂದಷ್ಟೇ ಉತ್ತರ ಪ್ರದೇಶದ  ಉನ್ನತ ಮಟ್ಟದ ಅಧಿಕಾರಿಗಳಿಗೆ ಚಿನ್ಮಾಯನಂದರಿಗೆ ಅರತಿ ಎತ್ತಿ ಪೂಜೆ ಸಲ್ಲಿಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಅತ್ಯಾಚಾರದ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದರೂ  ಚಿನ್ಮಾಯನಂದ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ. ಇಡೀ ಉತ್ತರ ಪ್ರದೇಶದ ಅಧಿಕಾರಿಗಳು ಚಿನ್ಮಾಯನಂದ ರಕ್ಷಣೆಗೆ ಮುಂದಾಗಿದೆ ಎಂದು ಅವರು ದೂರಿದ್ದಾರೆ. 

ಕಾನೂನು ವಿದ್ಯಾರ್ಥಿನಿಯ ಜಾಮೀನು ಅರ್ಜಿ ವಜಾಗೊಂಡ ಬಳಿಕ ಸುಲಿಗೆ ಆರೋಪದ ಮೇರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಲಾಗಿದೆ.  ಚಿನ್ಮಾಯನಂದ ಬಂಧನದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com